ಜ.12-13ಕ್ಕೆ ಐತಿಹಾಸಿಕ ಹಂಪಿ ಉತ್ಸವ

ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಂಪಿ ಉತ್ಸವವನ್ನು ಜನವರಿ 12 ಮತ್ತು 13 ರಂದು ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಅವರು ಶುಕ್ರವಾರ ತಿಳಿಸಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಳಗಾವಿ: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಂಪಿ ಉತ್ಸವವನ್ನು ಜನವರಿ 12 ಮತ್ತು 13 ರಂದು ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಅವರು ಶುಕ್ರವಾರ ತಿಳಿಸಿದ್ದಾರೆ. 
ಕಾಂಗ್ರೆಸ್'ನ ಕೆ.ಸಿ.ಕೊಂಡಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಜಯಮಾಲಾ ಅವರು, ಪ್ರಸಕ್ತ ಸಾಲಿನಲ್ಲಿ ಉತ್ಸವಕ್ಕಾಗಿ ಇಲಾಖೆ ರೂ.60 ಲಕ್ಷ ಅನುದಾನ ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ. 
ಬಳ್ಳಾರಿ ಜಿಲ್ಲಾಧಿಕಾರಿಗಳು ರೂ.8 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ರೂ.7.40ಕೋಟಿ ಹೆಚ್ಚುವರಿಯಾಗಿ ಒದಗಿಸುವಂತೆ ಆರ್ಥಿಕ ಇಲಾಖೆಯನ್ನು ಕೋರಲಾಗಿದೆ. ಕಲಾವಿದರು ಸಂಭಾವನೆ ರೂ.2.25 ಕೋಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಅಂದಾಜು ರೂ.8 ಕೋಟಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ.
ಉತ್ಸವದ ಅಂಗವಾಗಿ ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದ ಕಲಾವಿದರಿಂದ ವಿವಿಧ ಸಾಂಸ್ಕೃತಿಕ, ಕಲೆ ನೃತ್ಯ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಉಳಿದಂತೆ ವಿವಿಧ ದಿನಗಳಲ್ಲಿ ಶೋಭಾಯಾತ್ರೆ, ಚಿತ್ರಕಲಾ ಶಿಬಿರ, ಛಾಯಾಚಿತ್ರ ಸ್ಪರ್ಧೆ, ಕೈಗಾರಿಕಾ, ಕೃಷಿ, ಕರಕುಶಲ ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ, ಫಲಪುಷ್ಪ ಪ್ರದರ್ಶನ, ರಂಗೋಲಿ, ಮೆಹಂದಿ ಸ್ಪರ್ಧೆ, ಕುದುರೆ ಜಿಗಿತ ಸ್ಪರ್ಧೆ ಮುಂತಾದವುಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com