ಆ್ಯಂಬಿಡೆಂಟ್'ನಿಂದ ಮೈಸೂರಿನಲ್ಲೂ ರೂ.100 ಕೋಟಿ ವಂಚನೆ: ಸಿಬಿಐ ತನಿಖೆಗೆ ಮನವಿ

Published On :
ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಹೂಡಿಕೆದಾರರಿಗೆ ಕೋಟ್ಯಾಂತರ ರುಪಾಯಿ ವಂಚಿಸಿದ ಪ್ರಕರಣ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ.
ಆ್ಯಂಬಿಡೆಂಟ್ ಕಂಪನಿಯು ಮೈಸೂರಿನಲ್ಲಿ ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿಗೆ ಅಂದಾಜು ರೂ.100 ಕೋಟಿವರೆಗೆ ವಂಚಿಸಿದ್ದು, ಪ್ರಕರಣವನ್ನು ಕೇಂದ್ರ ತನಿಖಾ ದಳದ ತನಿಖೆಗೆ ವಹಿಸುವಂತೆ ಹೂಡಿಕೆದಾರರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಪ್ರಕರಣ ಸಂಬಂಧ ನಿನ್ನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠವು ರಾಜ್ಯ ಗೃಹ ಇಲಾಖೆ, ಸಿಬಿಐ ಹಾಗೂ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ತನಿಖಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅಮೃತೇಶ್ ಎಸ್.ಚೌಧರಿ ಹಾಜರಾಗಿ, ಆ್ಯಂಬಿಡೆಂಟ್ ಕಂಪನಿ ಸಾವಿರಾರು ಜನರಿಂದ ಕೋಟ್ಯಾಂತರ ಪಡೆದು ಹಿಂದಿರುಗಿಸದೆ ವಂಚಿಸಿದೆ. ಮೈಸೂರಿನ ಉದಯಗಿರಿ ಠಾಣಾ ಪೊಲೀಸರು ಪ್ರಕರಣವನ್ನು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿಕೊಂಡರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು, ಯಾವ ಕಾರಣಕ್ಕೆ ಸಿಬಿಐ ತನಿಖೆಗೆ ಆದೇಶಿಸಬೇಕಿದೆ ಎಂದು ಪ್ರಶ್ನಿಸಿದರು. ಅರ್ಜಿದಾರರ ಪರ ವಕೀಲರು ಉತ್ತರಿಸಿ, ಸಾರ್ವಜನಿಕರಿಗೆ ವಂಚಿಸಿದ ಪ್ರಕರಣಗಳನ್ನು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಶಾರದಾ ಹಗರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ತಿಳಿಸಿ, ಆ ತೀರ್ಪಿನ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ ನೋಟಿಸ್ ಜಾರಿಗೆ ಆದೇಶಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


