ಬೆಳಗಾವಿ, ಹುಬ್ಬಳ್ಳಿ ವಿ.ನಿಲ್ದಾಣಕ್ಕೆ ರಾಣಿ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಕುಮಾರಸ್ವಾಮಿ ಶಿಫಾರಸು

ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಹೆಸರನ್ನಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಹೆಸರನ್ನಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.
ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಕ್ರಮವಾಗಿ ಕಿತ್ತೂರು ರಾಣಿ ಚೆನ್ನಮ್ಮಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರನ್ನು ನಾಮಕರಣ ಮಾಡುವಂತೆ ಕುಮಾರಸ್ವಾಮಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ.
ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಬ್ರಿಟೀಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಕುರಿತಂತೆ ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಜನತೆ ಅಪಾರ ಅಭಿಮಾನ ಹೊಂದಿದ್ದಾರೆ. ಹೀಗಾಗಿ ಈ ನಗರಗಳ ವಿಮಾನ ನಿಲ್ದಾಣಗಳಿಗೆ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com