ರಾಜ್ಯದ 65,911 ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೆರಿಸಲು ಇಲಾಖೆ ನಿರ್ಧಾರ

ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ.
ರಾಜ್ಯದಲ್ಲಿ 65,911 ಅಂಗನವಾಡಿ ಕೇಂದ್ರಗಳಿದ್ದು, ಆ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಬೇಕಾದ ಅಗತ್ಯತೆಗಳ ಬಗ್ಗೆ ಎರಡು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಹೆಚ್ಚು ಗಮನ ಹರಿಸಲಾಗಿದೆ. 
ಅಂಗನವಾಜಿ ಕೇಂದ್ರಗಳಿಗೆ ಮೂಲಭೂತವಾಗಿ ಬೇಕಾಗಿರುವ ಭೂಮಿ, ಕಟ್ಟಡ, ಕುಡಿಯುವ ನೀರು, ವಿದ್ಯುತ್ ಪೂರೈಕೆ , ಫ್ಯಾನ್ ಹಾಗೂ ಮಕ್ಕಳಿಗೆ ಬೇಕಾಗುವ ಆಟಿಕೆಗಳನ್ನು ಸ್ಥಳೀಯ ಪಂಚಾಯಿತಿಗಳು ಒದಗಿಸಬೇಕೆಂದು ಸುತ್ತೊಲೆಯಲ್ಲಿ ತಿಳಿಸಲಾಗಿದೆ.
ತಮ್ನ ವ್ಯಾಪ್ತಿಗೆ ಬರುವ ಅಂಗನವಾಡಿಗಳಿಗೆ ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿಗಳು ಭೇಟಿ ನೀಡಿ.ಅಗತ್ಯವಿರುವ ಸೌಲಭ್ಯಗಳ ಪಟ್ಟಿ ಮಾಡಿ ಅವುಗಳನ್ನು ಒದಗಿಸುವಂತೆ ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಬೇಕಿದೆ, ತಮಗೆ ಬರುವ ಅನುದಾನ ನಿಧಿಯಲ್ಲಿ ಪಂಚಾಯಿತಿಗಳು ಈ ಸೌಲಭ್ಯ ಒದಗಿಸಬೇಕಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಹೇಳಿದ್ದಾರೆ.
ಕೆಲ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ, ಇರುವ ಕೆಲವು ಆಟಿಕೆಗಳನ್ನು ಮಕ್ಕಳು ಉಪಯೋಗಿಸಲು ಸಾಧ್ಯವಿಲ್ಲ, ಪೋಷಕರು ಮಕ್ಕಳನ್ನು ಅಂಗನವಾಡಿಗೆ ಬಿಟ್ಟು ಹೋಗುತ್ತಾರೆ. ಖಾಸಗಿ ಕೇಂದ್ರಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಾರೆ, ಸರ್ಕಾರಿ ಸಂಸ್ಥೆಗಳಲ್ಲಿ ನಾವು ಹಣ ಚಾರ್ಜ್ ವಿಧಿಸುವುದಿಲ್ಲ, ಹೀಗಾಗಿ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಿ, ಅವುಗಳಿಗೆ ಖಾಸಗಿ ಸಿಬ್ಬಂದಿ ನೇಮಿಸಿ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com