ಸಭೆ ಬಳಿಕ ಈ ವಿಚಾರ ತಿಳಿಸಿದ ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ ರೆಡ್ಡಿಯವರು, ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಲು ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಗಳಿಸುವುದರಲ್ಲಿ ರಾಮಲಿಂಗಾರೆಡ್ಡಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಕಾಂಗ್ರೆಸ್ ವರಿಷ್ಠರು ರಾಮಲಿಂಗಾರೆಡ್ಡಿಯವರನ್ನು ಕಡೆಗಣಿಸಿದ್ದಾರೆ. ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ದಿನಗಳನ್ನು ಸರ್ಕಾರಕ್ಕೆ ದೊಡ್ಡ ನಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.