ನಾಗರಹೊಳೆಯಲ್ಲಿ ಹುಲಿ ದಾಳಿ: ವ್ಯಕ್ತಿ ಸಾವು

ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಡಂಚಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಡಂಚಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. 
ಕೃಷ್ಣ ಅಲಿಯಾಸ್ ಮಧು (28) ಮೃತ ವ್ಯಕ್ತಿಯೆಂದು ಗುರ್ತಿಸಲಾಗಿದೆ. ಈತ ಮಾನಿಮೂಲೆ ಹಾಡಿ ನಿವಾಸಿದ್ದು, ಕಟ್ಟಿಗೆ ತರುವ ಸಲುವಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದನೆಂದು ಹೇಳಲಾಗುತ್ತಿದೆ. 
ಕಟ್ಟಿಗೆ ತರಲು ಹೋಗಿದ್ದ ಮಧು ಅವರು ಸಂಜೆಯಾದರೂ ಹಿಂತಿರುಗದ ಹಿನ್ನಲೆಯಲ್ಲಿ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಭಾಗಶಃ ತಿಂದು ಹಾಕಿದ್ದ ದೇಹವೊಂದು ಸ್ಥಳದಲ್ಲಿ ಪತ್ತೆಯಾಗಿದೆ. 
ಘಟನೆ ಬಳಿಕ ಸ್ಥಳಕ್ಕೆ ಧಾವಿಸಿದ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು, ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಮಾನವ ವಾಸಸ್ಥಳಕ್ಕೆ ಬಾರದಂತೆ ನೋಡಿಕೊಳ್ಳಲು ಶೀಘ್ರದಲ್ಲಿಯೇ ಬೇಲಿಗಳನ್ನು ಹಾಕಲಾಗುತ್ತದೆ. ಮೃತನ ಕುಟುಂಬಕ್ಕೆ ಪರಿಹಾರ ಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com