ಭಾಷಾ ಶಾಸ್ತ್ರಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯರಿಗೆ ಭಾಷಾ ಸಮ್ಮಾನ್‌ ಪ್ರಶಸ್ತಿ ಪ್ರದಾನ

ಕನ್ನಡದ ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ ‘ಭಾಷಾ ಸಮ್ಮಾನ್’....
ಭಾಷಾ ಶಾಸ್ತ್ರಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯರಿಗೆ ಭಾಷಾ ಸಮ್ಮಾನ್‌ ಪ್ರಶಸ್ತಿ ಪ್ರದಾ
ಭಾಷಾ ಶಾಸ್ತ್ರಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯರಿಗೆ ಭಾಷಾ ಸಮ್ಮಾನ್‌ ಪ್ರಶಸ್ತಿ ಪ್ರದಾ
Updated on
ಬೆಂಗಳೂರು: ಕನ್ನಡದ ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ ‘ಭಾಷಾ ಸಮ್ಮಾನ್’ ಪುರಸ್ಕಾರವನ್ನು ಪ್ರದಾನ ಮಾಡಿ ಗೌರವಿಸಲಾಯಿತು. 
ಜಯನಗರದ ಜಯರಾಮ ಸೇವಾ ಮಂಡಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡಿದರು. 
ಈ ವೇಳೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೆಂಕಟಸುಬ್ಬಯ್ಯ "ನಮ್ಮ ಗುರುಗಳಾದ ಬಿಎಂಶ್ರೀ ಅಂದು ನನಗೆ ಕನ್ನಡವನ್ನು ನಿಮ್ಮ ಕೈಯಲ್ಲಿಟ್ಟಿರುವೆ, ಕಾಪಾಡಿಕೊಳ್ಳಿ ಎಂಬ ಸಲಹೆ ನೀಡಿದ್ದರು. ಅವರ ಸೂಚನೆಯನ್ನು ಪಾಲಿಸಿದ ಫಲವೇ ಈ ಪ್ರಶಸ್ತಿ" ಎಂದು ಹೇಳಿದ್ದಾರೆ.
ಭಾಷಾ ಸಮ್ಮಾನ್ ಗೌರವವು  ಒಂದು ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com