ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ಈ ಅಪಘಾತ ನಡೆದಿದ್ದು, ಬಂಗಾರಪೇಟೆಯ ವಿವೇಕಾನಂದ ನಗರದ ಯುವಕ ನೀರಜ್(20) ಸ್ಥಳದಲ್ಲಿ ಸುಟ್ಟು ಕರಕಲಾದ ಬೈಕ್ ಸವಾರ. ಬೆಳ್ಳಂಬೆಳಗ್ಗೆ ನೀರಜ್ ಹಾಗೂ ಆತನ ಸ್ನೇಹಿತ ಬೈಕ್‍ನಲ್ಲಿ ತೆರೆಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತದ ಪರಿಣಾಮ ಬೈಕ್ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡು ಬೈಕ್ ಸವಾರ ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾನೆ.