ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಿಎಂಟಿಸಿಗೆ 3,000 ಹೊಸ ಬಸ್ ಗಳ ಸೇರ್ಪಡೆ: ಶೀಘ್ರದಲ್ಲೇ ಪ್ರಯಾಣ ದರ ಏರಿಕೆ ಸಾಧ್ಯತೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 3000 ಹೊಸ ಬಸ್ ಗಳ ಸೇರ್ಪಡೆಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಹೊಸ ವರ್ಷಕ್ಕೆ ಪ್ರಯಾಣ ದರ ಏರಿಕೆ ಶಾಕ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 3000 ಹೊಸ ಬಸ್ ಗಳ ಸೇರ್ಪಡೆಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಹೊಸ ವರ್ಷಕ್ಕೆ ಪ್ರಯಾಣ ದರ ಏರಿಕೆ ಶಾಕ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಕಳೆದ ಬಾರಿ ಶೇ.18ರಷ್ಟು ಬಸ್ ದರ ಹೆಚ್ಚಳಕ್ಕೆ ಹಿಂದೇಟು ಹಾಕಿದ್ದ ಹಿನ್ನಲೆಯಲ್ಲಿ ಈ ಬಾರಿ ಏರಿಕೆಯ ಪ್ರಮಾಣವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. 
ಸಾರಿಗೆ ಸಂಸ್ಥೆಗಳು ನಷ್ಟದಲ್ಲಿರುವ ಹಿನ್ನಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆಯು ಅನಿವಾರ್ಯವಾಗಿದ್ದು, ಮುಖ್ಯಮಂತ್ರಿಗಳಿಗೆ ಶೀಘ್ರದಲ್ಲಿಯೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಹೇಳಿದ್ದಾರೆ. 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಶೇ.18 ರಷ್ಟು ಬಸ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಹೆಚ್ಚಳದ ಪ್ರಮಾಣವು ಹೆಚ್ಚಾಗಿದೆ ಎಂದು ಮುಖ್ಯಮಂತ್ರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಬಸ್ ದರ ಹೆಚ್ಚಳ ಕುರಿತು ಮುಖ್ಯಮಂತ್ರಿಗಳ ಅವಗಾಹನೆಗೆ ಬಿಡಲಾಗಿದೆ ಎಂದು ತಿಳಿಸಿದರು. 
ಈಶಾನ್ಯ, ವಾಯುವ್ಯ, ಕೆಎಸ್'ಆರ್'ಟಿಸಿ ಹಾಗೂ ಬಿಎಂಟಿಸಿ ಸಾರಿಗೆ ಸಂಸ್ಥೆಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ.687 ಕೋಟಿ ನಷ್ಟವಾಗಿದೆ. ಸಂಸ್ಥೆ ನಿರ್ವಹಣೆ, ಸಿಬ್ಬಂದಿ ವೇತನ ಸೇರಿದಂತೆ ಇತರೆ ಸೌಲಭ್ಯಗಳಿಗೆ ಆರ್ಥಿಕ ಹೊರೆಯಾಗುತ್ತಿದೆ. ಈ ಬಗ್ಗೆ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಡೀಸೆಲ್ ದರ ಪ್ರತಿ ಲೀಟರ್'ಗೆ ರೂ.53 ಇದ್ದಾಗ ಬಸ್ ದರ ಹೆಚ್ಚಳ ಮಾಡಲಾಗಿತ್ತು. 
ಪ್ರತಿ ಲೀಟರ್'ಗೆ ರೂ.78 ಇದ್ದರೂ ಬಸ್ ದರ ಹೆಚ್ಚಳ ಮಾಡಿರಲಿಲ್ಲ. ಬರ್ ದರ ಹೆಚ್ಚಳ ಮಾಡದಿದ್ಹರೆ ಸರ್ಕಾರದಿಂದ ಅನುದಾನ ನೀಡುವಂತೆ ಕೋರಲಾಗುವುದು. ಸಾರಿಗೆ ಸಂಸ್ಥೆ ಉಳಿಯಬೇಕಾದರೆ ಬಸ್ ದರ ಹೆಚ್ಚಳ ಅನಿವಾರ್ಯವಾಗಿದೆ. ಬಸ್ ದರ ಏರಿಕೆಯ ಪ್ರಮಾಣದ ಕುರಿತು ಮುಖ್ಯಮಂತ್ರಿಗಳ ವಿವೇಚನಗೆ ಬಿಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com