ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ತನ್ನ ಲಾರಿಗೆ ಗುದ್ದಿಸಿಕೊಂಡು 70 ಜನರ ಪ್ರಾಣ ಉಳಿಸಿದ ಚಾಣಾಕ್ಷ ಚಾಲಕ

ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ಇಂದು ನಡೆದಿದೆ.
ಬಸ್ಸು ಹಾಗೂ ಲಾರಿನ ಚಿತ್ರ
ಬಸ್ಸು ಹಾಗೂ ಲಾರಿನ ಚಿತ್ರ

ಕಾರವಾರ: ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ಇಂದು ನಡೆದಿದೆ.

 ಚಾಲಕಿ ಲಾರಿ ಚಾಲಕ ಈರಣ್ಣ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಚಾಲಕ ಕತ್ತಿ ಕಾನಾಪುರ್ ತಮ್ಮ ಜೀವದ ಹಂಗನ್ನೇ ತೊರೆದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  70 ಜನರ ಪ್ರಾಣ ಕಾಪಾಡಿದ್ದಾರೆ.  ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ಪದೇ ಪದೇ ತನ್ನ ಲಾರಿಗೆ ಗುದ್ದಿಸಿಕೊಂಡು ಪ್ರಯಾಣಿಕರನ್ನು ಅಪಾಯದಿಂದ ರಕ್ಷಿಸಿದ್ದಾರೆ.

ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ಹೋಗುತ್ತಿದ್ದ ಬಸ್ ಅರಬೈಲ್  ಪ್ರದೇಶದ ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದೆ. ಆದರೆ, ಬಸ್ ಚಾಲಕನ ನಿಯಂತ್ರಣದಲ್ಲಿರಲಿಲ್ಲ.  ಇದರಿಂದಾಗಿ ಬಸ್  ಕಂದಕಕ್ಕೆ ಬಿದ್ದು  ದೊಡ್ಡ ಅನಾಹುತಾಗುವ ಸಾಧ್ಯತೆ ಹೆಚ್ಚಾಗಿತ್ತು.
ಇಂತಹ ಕಠಿಣ ಸಂದರ್ಭದಲ್ಲಿ  ಬಸ್ ಚಾಲಕ ಮುಂದೆ ಚಲಿಸುತ್ತಿದ್ದ ಲಾರಿಗೆ ಎರಡು ಬಾರಿ ಡಿಕ್ಕಿ ಹೊಡೆದಿದ್ದಾನೆ. ಬಸ್ಸು ಬ್ರೇಕ್ ಫೇಲ್ ಆಗಿದೆ ಎಂದು ಅಂದಾಜಿಸಿದ ಲಾರಿ ಚಾಲಕ  ಪದೇ ಪದೇ ಡಿಕ್ಕಿ ಹೊಡೆಸಿಕೊಳ್ಳುತ್ತಲೇ ನಿಧಾನವಾಗಿ ಬಂದಿದ್ದಾನೆ. ನಂತರ ಬಸ್ಸಿನ ವೇಗ ಕಡಿಮೆಯಾಗಿದೆ. ಹೀಗೆ ಸತತ ನಾಲ್ಕು ಕಿಲೋ ಮೀಟರ್ ವರೆಗೂ  ಸಾಗಿದ ನಂತರ ಬಸ್ ನಿಲ್ಲುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com