ಖಡಕ್ ಅಧಿಕಾರಿ ಮಧುಕರ್ ಶೆಟ್ಟಿ ಪಂಚಭೂತಗಳಲ್ಲಿ ಲೀನ

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಕ್ರಿಯೆ ಹುಟ್ಟುರು ಕುಂದಾಪುರದ ಶಿರಿಯಾರ ಸಮೀಪ ಯಡಾಡಿಯಲ್ಲಿ ನೆರವೇರಿದೆ. ಜಿಲ್ಲಾಡಳಿತ ವತಿಯಿಂದ....
ಖಡಕ್ ಅಧಿಕಾರಿ ಮಧುಕರ್ ಶೆಟ್ಟಿ ಪಂಚಭೂತಗಳಲ್ಲಿ ಲೀನ
ಖಡಕ್ ಅಧಿಕಾರಿ ಮಧುಕರ್ ಶೆಟ್ಟಿ ಪಂಚಭೂತಗಳಲ್ಲಿ ಲೀನ
Updated on
ಕುಂದಾಪುರ: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಕ್ರಿಯೆ ಹುಟ್ಟುರು ಕುಂದಾಪುರದ ಶಿರಿಯಾರ ಸಮೀಪ ಯಡಾಡಿಯಲ್ಲಿ ನೆರವೇರಿದೆ. ಜಿಲ್ಲಾಡಳಿತ ವತಿಯಿಂದ ಸಕಲ ಸಕಾರಿ ಗೌರವಗಳೊಡನೆ ಅಂತ್ಯ ಸಂಸ್ಕಾರ ನಡೆಸಲಾಗಿದೆ.
ಈ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಅಧಿಕಾರಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಇದ್ದರು.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
ಇದಲ್ಲದೆ ಯುಟಿ ಖಾದರ್, ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸಹ ಮೃತ ಅಧಿಕಾರಿಗೆ ಅಂತಿಮ ಗೌರವ ಸೂಚಿಸಿದ್ದರು. 
ಅಂತಿಮವಾಗಿ ಮನೆ ಹಿಂದಿನ ತೋಟದಲ್ಲಿ ಮುರಳಿ ಶೆಟ್ಟಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಮೃತರಿಗೆ ಓರ್ವ ಪುತ್ರಿ ಮಾತ್ರವೇ ಇದ್ದ ಕಾರಣ ನಾಲ್ವರು ಒಟ್ಟಾಗಿ ಚಿತೆಗೆ ಅಗ್ನಿ ಸ್ಪರ್ಶ ನೆರವೇರಿಸಿದ್ದರು. ಮಗಳು ಸಮ್ಯಾ, ಅಣ್ಣನ ಮಗ ಸಾರಂಗ್, ಸಹೋದರ ಮುರುಳಿಧರ್ ಶೆಟ್ಟಿ, ಸುಧಾಕರ್ ಶೆಟ್ಟಿ ಚಿತೆಗೆ ಬೆಂಕಿ ಇಟ್ಟಿದ್ದಾರೆ. ಈ ವೇಳೆ ಪತಿಯ ಚಿತೆಯ ಮುಂದೆ ನಿಂತಿದ್ದ ಪತ್ನಿ ಸ್ವರ್ಣ ದುಃಖಿತರಾದರು.
ಎಚ್ 1 ಎನ್ 1 ಜ್ವರ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಐಪಿಎಸ್ ಮಧುಕರ್ ಶೆಟ್ಟಿ(47)ಯವರು ಶುಕ್ರವಾರ ರಾತ್ರಿ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com