ಕಲ್ಲಿದ್ದಲು ಕೊರತೆ :ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತ

ಈ ಬಾರಿ ಕಲ್ಲಿದ್ದಲು ಪೂರೈಕೆಯಲ್ಲಿ ಭಾರಿ ಪ್ರಮಾಣದ ಕೊರತೆ ಉಂಟಾಗಿದ್ದು, ಮಳೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ ಎಂದು ರಾಜ್ಯ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ನಾಯಕ್ ಹೇಳಿದ್ದಾರೆ.
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಸಾಂಧರ್ಬಿಕ ಚಿತ್ರ
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಸಾಂಧರ್ಬಿಕ ಚಿತ್ರ

ರಾಯಚೂರು:  ಈ ಬಾರಿ ಕಲ್ಲಿದ್ದಲು ಪೂರೈಕೆಯಲ್ಲಿ ಭಾರಿ ಪ್ರಮಾಣದ ಕೊರತೆ ಉಂಟಾಗಿದ್ದು, ಮಳೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ ಎಂದು ರಾಜ್ಯ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ನಾಯಕ್ ಹೇಳಿದ್ದಾರೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್  ಸ್ಥಾವರಕ್ಕೆ  ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರು, ಕಲ್ಲಿದಲ್ಲು ಕೊರತೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ . ಬಳ್ಳಾರಿ ಹಾಗೂ ಯೆರಾಗೇರಾ ಶಾಖೋತ್ಪನ್ನ ಕೇಂದ್ರಗಳಿಗೆ  10 ಲಕ್ಷ ಟನ್ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ವಿದ್ಯುತ್ ಘಟಕಗಳಿಗೂ   136 ಲಕ್ಷ ಟನ್ ಕಲ್ಲಿದ್ದಲು ಅಗತ್ಯವಿದೆ. ಸಿಂಗಾರೇಣಿಯಿಂದ  ರಾಜ್ಯಕ್ಕೆ 56 ಲಕ್ಷ ಟನ್ ಕಲ್ಲಿದ್ದಲು ಬಂದಿದೆ. 79 ಲಕ್ಷ ಟನ್ ಕಲ್ಲಿದ್ದಲಿನ ಕೊರತೆ ಎದುರಾಗಿದೆ. ಬಳ್ಳಾರಿ ಹಾಗೂ ಯೆರಾಗೇರಾ ಕೇಂದ್ರಗಳಿಗೆ ಹೆಚ್ಚಿನ ಪ್ರಮಾಣದ ಕಲ್ಲಿದ್ದಲಿನ ಅಗತ್ಯವಿದ್ದು, ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

ಬೇಸಿಗೆ ಸಮೀಪಿಸುತ್ತಿದ್ದು, ವಿದ್ಯುತ್ ಉತ್ಪಾದನೆಗೆ ಕೊರತೆಯಾಗದಂತೆ ಟೆಂಡರ್ ಕರೆಯಲಾಗುವುದು, ಉತ್ತಮ ಗುಣಮಟ್ಟದ ಕಲ್ಲಿದ್ದಲು ಪೂರೈಕೆಯತ್ತ ಟೆಂಡರ್ ನಲ್ಲಿ ಗಮನ ಹರಿಸಲಾಗುವುದು ಎಂದರು

ಈ ವರ್ಷ 17, 875 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಕಳೆದ ವರ್ಷ 19,767 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಲಾಗಿತ್ತು, .ಕಳೆದ ವರ್ಷಕ್ಕೆ ಹೋಲಿಸಿದ್ದರೆ ಈ ಬಾರಿ ಕಡಿಮೆ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಮಳೆ ಹಾಗೂ ಕಲ್ಲಿದ್ದಲು ಕೊರತೆಯೇ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳಲು ಕಾರಣವಾಗಿದೆ  ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com