ಕನ್ನಡ ಒಕ್ಕೂಟ ಮತ್ತು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಹೋರಾಟಗಾರ ಕೆಆರ್ ಕುಮಾರ್ ಮತ್ತು ಇನ್ನೂ ಕೆಲವರು ನಿನ್ನೆ ಮಧ್ಯಾಹ್ನದ ವೇಳೆಗೆ ಫ್ರೀಡಂ ಪಾರ್ಕ್ ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಬಿಜೆಪಿ ಸಮಾವೇಶದಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿಯವರು ಮಹದಾಯಿ ಜಲ ವಿವಾದ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಹೇಳಿದರು. ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮಹದಾಯಿ ಜಲ ವಿವಾದ ಕುರಿತು ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು.