ವಿಧಾನ ಮಂಡಲ ಅಧಿವೇಶನ ಆರಂಭ; ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ

ಹಾಲಿ ಸರ್ಕಾರದ ಕೊನೆಯ ಅಧಿವೇಶನ ಮತ್ತು ಪ್ರಸಕ್ತ ವರ್ಷದ ಮೊದಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ
Updated on

ಬೆಂಗಳೂರು: ಹಾಲಿ ಸರ್ಕಾರದ ಕೊನೆಯ ಅಧಿವೇಶನ ಮತ್ತು ಪ್ರಸಕ್ತ ವರ್ಷದ ಮೊದಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ವಿಧಾನ ಮಂಡಲದ ಪ್ರಸಕ್ತ ಸಾಲಿನ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ರಾಜ್ಯಸರ್ಕಾರದ  ಸಾಧನೆಗಳು, ಜಾರಿಯಾದ ಯೋಜನೆಗಳ ಕುರಿತು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದು, ಪ್ರಮುಖವಾಗಿ ಮಹದಾಯಿ ಸಮಸ್ಯೆ ಕುರಿತು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ ಮಾಡಲಾಗಿದೆ.

"ರಾಜ್ಯ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದ್ದು, ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಲಾಗಿದೆ. ಅಂತೆಯೇ ಎಲ್ಲ ಕಾರಾಗೃಹಗಳಲ್ಲಿ ಸುರಕ್ಷತೆಗಾಗಿ ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಪೊಲೀಸ್  ಇಲಾಖೆಯ ಅಭಿವೃದ್ಧಿಗಾಗಿ ಮತ್ತು ಸಿಬ್ಬಂದಿ ಕೊರತೆ ಸಮಸ್ಯೆ ನೀಗಿಸಲು ಸಿಬ್ಬಂದಿ ನೇಮಕ ಮಾಡಿದ್ದೇವೆ. ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಸ್ನೇಹ ಸಂಬಂಧ ವೃದ್ಧಿಗಾಗಿ ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿ  ಮಾಡಲಾಗಿದೆ.

ಅಂತೆಯೇ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಪ್ರಮುಖವಾಗಿ ಹಸಿವು ಮುಕ್ತ ರಾಜ್ಯಕ್ಕಾಗಿ ಇಂದಿರಾ ಕ್ಯಾಂಟೀನ್, ಅನ್ನಭಾಗ್ಯದಂತಹ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ  ಮಾಡಲಾಗಿದೆ. ರೈತರ ಸಾಲಮನ್ನಾ ನಿರ್ಧಾರ ಸರ್ಕಾರದ ಮಹತ್ವದ ನಿರ್ಧಾರಗಳಲ್ಲಿ ಒಂದಾಗಿದ್ದು, ರೈತರಿಗಾಗಿ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ನೀಡಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಲಕ್ಷಾಂತರ  ರೈತರು ಫಲಾನುಭವಿಗಳಾಗಿದ್ದು, ವಿವಿಧ ಬಗೆಯ ಸವಲತ್ತು ಪಡೆಯುತ್ತಿದ್ದಾರೆ.

ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಎಲ್ಲ ವರ್ಗಕ್ಕಾಗಿ ಸಾಮಾಜಿಕ ನ್ಯಾಯ ನೀಡಿಕೆಗೆ ಕ್ರಮ ಕೈಗೊಂಡಿದ್ದೇವೆ, ಬಡವರು. ದುರ್ಬಲರು, ಮಧ್ಯಮವರ್ಗದ ಕಲ್ಯಾಣಕ್ಕೆ ಸರ್ಕಾರ ಕಟಿಬದ್ಧವಾಗಿದೆ.  ಆರ್ಥಿಕ ಅಭಿವೃದ್ಧಿ ಸಾಧಿಸುವಲ್ಲಿ ಸರ್ಕಾರ ಯಶಸ್ವಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಕೋಮು ಸೌಹಾರ್ಧ ಸಭೆಗಳನ್ನು ನಡೆಸಲಾಗುತ್ತಿದೆ.  ನೀರಿನ ವಿಚಾರದಲ್ಲಿ ಸರ್ಕಾರ ತನ್ನ ಬದ್ಧತೆ ಪ್ರದರ್ಶನ ಮಾಡಿದ್ದು, ನೀರಿನ ವಿಚಾರದಲ್ಲಿ ನಮ್ಮ ಹಕ್ಕಿಗಾಗಿ ರಾಜ್ಯ ಸರ್ಕಾರ ಹೋರಾಟ ಮುಂದುವರಿಸಿದೆ. ಗೋವಾದೊಂದಿಗಿನ ಮಹದಾಯಿ ನೀರಿಗಾಗಿ ಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮುಂದುವರೆಸಿದ್ದು, ನಮ್ಮ ಹಕ್ಕು ಸಾಧನೆಗಾಗಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಕಾವೇರಿ. ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿನ ನೀರಿನ ಬೇಡಿಕೆಯನ್ನು ಪೂರ್ಣಗೊಳಿಸಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com