ಪ್ರಾಥಮಿಕ ತನಿಖೆಯ ನಂತರ ಇಂಧನ ಸೋರಿಕೆಯಿಂದ ಕಾರಿಗೆ ಬೆಂಕಿ ತಗುಲಿದೆ ಎಂಬ ಮಾಹಿತಿಯನ್ನು ಪೊಲೀಸರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ತಾಂತ್ರಿಕ ಮತ್ತು ಎಲೆಕ್ಟ್ರಿಕಲ್ ದೋಷದಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ಕಾರಿನಲ್ಲಿ ತಾಂತ್ರಿಕ ದೋಷ ಪತ್ತೆಯಾದರೆ ಕಾರು ಸರ್ವೀಸ್ ಮಾಡಿದ ಸಿಬ್ಬಂದಿಯನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.