ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆನ ವೈಮನಸ್ಯ ಮರೆತು ಮಹಾಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿ ಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನಿರ್ಧರಿಸಿದ್ದಾರೆ. ಗೌಡರು ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಪಡೆದಿದ್ದ ಜಿಲ್ಲಾಡಳಿತ, ಹಿರಿಯ ಕೆಎಎಸ್ ಅಧಿಕಾರಿಯನ್ನು ಸೋಮವಾರ ಸಂಜೆ ದೇವೇಗೌಡರ ನಿವಾಸಕ್ಕೆ ಕಳುಹಿಸಿ ಅವರ ಮನವೊಲಿಸುವಲ್ಲಿ ಸಫಲವಾಯಿತು. ಹೀಗಾಗಿ ಬುಧವಾರ ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಸಿಎಂ ಅವರೊಂದಿಗೆ ದೇವೇಗೌಡರು ವೇದಿಕೆ ಹಂಚಿಕೊಳ್ಳುವುದು ಖಚಿತವಾಗಿದೆ.