ಶ್ರವಣ ಬೆಳಗೊಳದಲ್ಲಿ ನಿರ್ಮಿಸಲಾಗಿರುವ ಚಾವುಂಡರಾಯ ಸಭಾಮಂಟಪದಲ್ಲಿಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು, ದೀಪ ಬೆಳಗುವುದರ ಮೂಲಕ ಮಹ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಕೋವಿಂದ್ ಅವರ ಪತ್ನಿ ಸರಿತಾ ಅವರು ಕೂಡ ಭಾಗಿಯಾಗಿದ್ದರು. ಇದೇ ವೇಳೆ ರಾಷ್ಟ್ರಪತಿ ಕೋವಿಂದ್ ಅವರು, ಸ್ವರ್ಣ ಗೊಮ್ಮಟ ಪುತ್ತಳಿಯ ತೆರೆ ಸರಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಚಿವ ಎ.ಮಂಜು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದಾರೆ.