ಅಯೋಧ್ಯೆ ವಿವಾದ: ಮಸೀದಿ ಸ್ಥಳಾಂತರಕ್ಕೆ ಇಸ್ಲಾಂನಲ್ಲಿ ಅನುಮತಿಯಿದೆ- ಮುಸ್ಲಿಂ ಕಾನೂನು ಮಂಡಳಿ

ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು ಹಾಗೂ ಮುಸ್ಲಿಂ ಸಂಘಟನೆಗಳ ನಡುವೆ ಒಮ್ಮತಕ್ಕೆ ಯತ್ನ ನಡೆಸುತ್ತಿರುವ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧರ್ಮಗುರು ಶ್ರೀ ಶ್ರೀ ರವಿಶಂಕರ ಗುರೂಡಿಯವರ ಯತ್ನ ಫಲ ನೀಡುವ ಬೆಳವಣಿಗೆಗಳು ಕಂಡು ಬರುತ್ತಿವೆ...
ಬಾಬ್ರಿ ಮಸೀದಿ
ಬಾಬ್ರಿ ಮಸೀದಿ
ಬೆಂಗಳೂರು: ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು ಹಾಗೂ ಮುಸ್ಲಿಂ ಸಂಘಟನೆಗಳ ನಡುವೆ ಒಮ್ಮತಕ್ಕೆ ಯತ್ನ ನಡೆಸುತ್ತಿರುವ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧರ್ಮಗುರು ಶ್ರೀ ಶ್ರೀ ರವಿಶಂಕರ ಗುರೂಡಿಯವರ ಯತ್ನ ಫಲ ನೀಡುವ ಬೆಳವಣಿಗೆಗಳು ಕಂಡು ಬರುತ್ತಿವೆ. 
ಬೆಂಗಳೂರಿನ ಶಿವಾಜಿನಗರದ ಖಾಸಗಿ ಬಂಗಲೆಯೊಂದರಲ್ಲಿ ನಿನ್ನೆಯಷ್ಟೇ ರವಿಶಂಕರ್ ಗುರೂಜಿಯವರು ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರು. ಮೂರು ಗಂಟೆಗಳ ಕಾಲ ಸುದೀರ್ಘ ಮಾತುಕತೆ ನಡೆಸಿದ್ದರು. 
ಸಭೆಯಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ 16 ಸದಸ್ಯರು, ಉತ್ತರಪ್ರದೇಶ ಸುನ್ನಿ ವಕ್ಫ್ ಮಂಡಳಿ ಮುಖ್ಯಸ್ಥ ಝುಫರ್ ಅಹಮದ್, ಅಯೋಧ್ಯೆ ಪ್ರಕರಣದ ಪ್ರಮುಖ ಅರ್ಜಿದಾರರಲ್ಲಿ ಒಬ್ಬರಾದ ಹಾಜಿ ಮೆಹಬೂಬ್, ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. 
ಸಭೆಯಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು ವಿವಾದಿತ ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದು, ಅರ್ಜಿದಾರ ಹಾಜಿ ಮೆಹಬೂಬ್ ಅವರೂ ಕೂಡ ಮಂದಿರ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟು ಬೇರೆಡೆ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 
ಅಯೋಧ್ಯೆ ವಿವಾದದ ಅಂತಿಮ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ ನಿನ್ನೆ ಆರಂಭಿಸಿದ್ದು, ವಿವಾದದ ಕುರಿತ ಕಡತಗಳ ಆಂಗ್ಲಭಾಷಾ ತರ್ಜುಮೆಯ ಪ್ರತಿಗಳನ್ನು 2 ವಾರದೊಳಗೆ ಸಲ್ಲಿಸುವಂತೆ ನ್ಯಾಯಾಪೀಠ ತಿಳಿಸಿದೆ. ಅಲ್ಲದೆ, ವಿಚಾರಣೆಯನ್ನು ಮಾ.14ಕ್ಕೆ ಮುಂದೂಡಿದೆ. 
ವಿಚಾರಣೆ ಆರಂಭಿಸಿದ್ದ ಮುಖ್ಯ ನ್ಯಾಯಾಧೀಶ ನ್ಯಾ.ದೀಪಕ್ ಮಿಶ್ರಾ, ನ್ಯಾ.ಅಬ್ದುಲ್ ನಜೀರ್ ಹಾಗೂ ನ್ಯಾ.ಅಶೋಕ್ ಭೂಷಣ್ ಅವರ ಪೀಠ, ಅಪೀಲುಗಳನ್ನು ಮಾ.14 ರಂದು ವಿಚಾರಣೆ ಮಾಡುವುದಾಗಿ ಹೇಳಿತಲ್ಲದೇ, ತಾನೂ ಯಾವತ್ತೂ ದೈನಂದಿನ ವಿಚಾರಣೆ ನಡೆಸುವ ಇರಾದೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com