5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟದ ಸಿಬ್ಬಂದಿ ಧರಣಿ

ಕನಿಷ್ಟ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ಮಂಗಳವಾರದಿಂದ ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಶುಕ್ರವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ...
5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟದ ಸಿಬ್ಬಂದಿ ಧರಣಿ
5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟದ ಸಿಬ್ಬಂದಿ ಧರಣಿ
ಬೆಂಗಳೂರು: ಕನಿಷ್ಟ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ಮಂಗಳವಾರದಿಂದ ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಶುಕ್ರವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. 
ಹೋರಾಟದ ಬಿಸಿಗೆ ಕರಗಿದ ರಾಜ್ಯ ಸರ್ಕಾರ ಕಾರ್ಯಕರ್ತೆಯರೊಂದಿಗೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ನಿರ್ಧಾರವಾಗದ ಹಿನ್ನಲೆಯಲ್ಲಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. 
ಪ್ರತಿಭಟನೆಯ ಪರಿಣಾಮ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಬಿಸಿಯೂಟ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸುಮಾರು 60 ಲಕ್ಷಶ ಮಕ್ಕಳಿಕಗೆ ಬಿಸಿಯೂಟ ದೊರೆಯುತ್ತಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ. 
ಶಾಲಾ ಪೋಷಕರ ಸಂಘ ಹಾಗೂ ಸ್ಥಳೀಯ ಸಂಘಟನೆಗಳ ಮೂಲಕ ಮಕ್ಕಳಿಗೆ ಬಿಸಿಯೂಟ ಒದಗಿಸಿದ್ದಾಗಿ ಸಾರ್ವಜನಿಕ ಇಲಾಖೆ ಅಧಿಕಾರಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಹೋರಾಟದ ಪರಿಣಾಮ ಸರ್ಕಾರಿ ಶಾಲಾ ಮಕ್ಕಳು ಬಿಸಿಯೂಟ ಪೂರೈಕೆಯಲ್ಲಿ ಸಾಕಷ್ಟು ಕಡೆ ವ್ಯತ್ಯಯವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಶುಕ್ರವಾರದಿಂದ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರ ಗೊಳಿಸುತ್ತೇವೆ. ಈಗಾಗಲೇ ಕೆಲಸಕ್ಕೆ ಹೋಗದಂತೆ ಎಲ್ಲರಿಗೂ ತಿಳಿಸಲಾಗಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಅವರೆಗೆರೆ ಚಂದ್ರು ಅವರು ಹೇಳಿದ್ದಾರೆ. ಈ ನಡುವೆ ಸಿಐಟಿಯು ಮತ್ತು ಎಐಟಿಯುಸಿ ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com