ಮೇಘನಾ ಆತ್ಮಹತ್ಯೆ ಪ್ರಕರಣ: ನಾಲ್ವರು ವಿದ್ಯಾರ್ಥಿಗಳಿಗೆ ನೋಟಿಸ್

ಎರಡು ದಿನಗಳ ಹಿಂದೆ ನಡೆದ ಮೇಘನಾ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ರಾಜರಾಜೇಶ್ವರಿ ನಗರ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
ಆತ್ಮಹತ್ಯೆಯ( ಸಾಂದರ್ಭಿಕ ಚಿತ್ರ)
ಆತ್ಮಹತ್ಯೆಯ( ಸಾಂದರ್ಭಿಕ ಚಿತ್ರ)

ಬೆಂಗಳೂರು: ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ
ಮೇಘನಾ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ರಾಜರಾಜೇಶ್ವರಿ ನಗರ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಕಾಲೇಜ್ ಆವರಣದಲ್ಲಿ ಮೇಘನಾ ಹಾಗೂ ಆ ಗುಂಪಿನ ವಿದ್ಯಾರ್ಥಿಗಳೊಂದಿಗೆ ನಡೆದಿರುವ ಜಗಳದ ದೃಶ್ಯದ ತುಣುಕುಗಳನ್ನು ಪೊಲೀಸರು ಪಡೆದಿದ್ದು, ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೇಘನಾ ರಾಜರಾಜೇಶ್ವರಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು. ಕಾಲೇಜಿನಲ್ಲಿನ ವಿದ್ಯಾರ್ಥಿಗಳ ಕಿರುಕುಳದಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೇಘನಾ ಜೊತೆಗೆ ಜಗಳ ವಾಡಿದ ನಾಲ್ವರು ವಿದ್ಯಾರ್ಥಿಗಳು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ . ಮೇಘನಾ ಹೇಳಿಕೆ ದಾಖಲಾಗಿದ್ದು, ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ನಂತರ ಈ ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com