ಬೆಂಗಳೂರಿನ ಸಂಚಾರಿ ಪೊಲೀಸರ ಆರೋಗ್ಯ: ವರದಿ ಸಲ್ಲಿಕೆಗೆ ರಾಜ್ಯ ಮುಖ್ಯಕಾರ್ಯದರ್ಶಿಗೆ ಎನ್ ಹೆಚ್ ಆರ್ ಸಿ ನೋಟಿಸ್

ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರ ಆರೋಗ್ಯ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ನೋಟಿಸ್ ನೀಡಿದೆ.
ಬೆಂಗಳೂರಿನ ಟ್ರಾಫಿಕ್ ಪೊಲೀಸರ (ಸಾಂದರ್ಭಿಕ ಚಿತ್ರ
ಬೆಂಗಳೂರಿನ ಟ್ರಾಫಿಕ್ ಪೊಲೀಸರ (ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರ ಆರೋಗ್ಯ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ನೋಟಿಸ್ ನೀಡಿದೆ.

ಸೆಂಟ್ ಜಾನ್ಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳ ತಜ್ಞರು ಕಳೆದ ವರ್ಷ ನಡೆಸಿದ ಸಮೀಕ್ಷೆ ಪ್ರಕಾರ ಬೆಂಗಳೂರಿನ ಶೇ. 31 ರಷ್ಟು ಸಂಚಾರಿ ಪೊಲೀಸರು ಶ್ವಾಸಕೋಶ ಹಾಗೂ ಶೇ. 20 ರಷ್ಟು ಮಂದಿ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ನಗರದಲ್ಲಿನ ಮಿತಿ ಮೀರಿದ ವಾಯುಮಾಲಿನ್ಯವೇ ಇದಕೆಲ್ಲಾ ಕಾರಣ ಎನ್ನಲಾಗಿತ್ತು.

 ಈ  ಸಂಬಂಧ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗ , ಮಿತಿ ಮೀರಿದ ವಾಯುಮಾಲಿನ್ಯದಿಂದ ಸಂಚಾರಿ ಪೊಲೀಸರ ಜೀವನ ನಿರೀಕ್ಷೆ ಕ್ಷೀಣಿಸುತ್ತಿದ್ದು,  ವಾಯುಮಾಲಿನ್ಯದಿಂದ ಉಸಿರಾಟ, ಶ್ವಾಸಕೋಸ ಸಂಬಂಧಿತ ಸಮಸ್ಯೆಗಳು ಹಾಗೂ ಶಬ್ದಮಾಲಿನ್ಯದಿಂದ ಕಿವಿ ಸಮಸ್ಯೆ , ರಕ್ತದೊತ್ತಡ ಮತ್ತಿತರ ಸಮಸ್ಯೆಗಳು ಉಲ್ಬಣಗೊಳ್ಳುತ್ತಿರುವುದನ್ನು ಪತ್ತೆ ಹಚ್ಚಿರುವುದಾಗಿ ನೋಟಿಸ್ ನಲ್ಲಿ ತಿಳಿಸಿದೆ.

 ಈ ವಿಷಯಕ್ಕೆ ಸಂಬಂಧಿಸಿದಂತೆ 8 ತಿಂಗಳೊಳಗೆ ವಿಸ್ತೃತ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿಗೊಳಿಸಿದೆ. ರಾಜ್ಯಗಳು ಪ್ರತಿಕ್ರಿಯೆ ನೀಡದೆ ಹೋದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ.

 ಸಂಚಾರಿ ಪೊಲೀಸರಿಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ಆದರೆ, ವೈದ್ಯಕೀಯ ಸೌಲಭ್ಯವನ್ನು  ನೀಡುತ್ತಿಲ್ಲ. ಸ್ವಯಂ ಸೇವಕ ಸಂಘಗಳ ಸಹಯೋಗದಲ್ಲಿ ವರ್ಷಕ್ಕೊಮ್ಮೆ ವೈದ್ಯಕೀಯ ಶಿಬಿರ ಆಯೋಜಿಸಲಾಗುತ್ತದೆ ಆದರೆ, ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com