ಬೆಂಗಳೂರು: ಅತಿಥಿ ಗೃಹದ 5ನೇ ಮಹಡಿಯಿಂದ ಕೆಳಗೆ ಹಾರಿ ಟೆಕ್ಕಿ ಆತ್ಮಹತ್ಯೆ

ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೊಗುರಿನಲ್ಲಿ 26 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ....
ರಿಶಬ್ ಶುಕ್ಲಾ(ಸಂಗ್ರಹ ಚಿತ್ರ)
ರಿಶಬ್ ಶುಕ್ಲಾ(ಸಂಗ್ರಹ ಚಿತ್ರ)
Updated on: 
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೊಗುರಿನಲ್ಲಿ 26 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ತಾನು ವಾಸ್ತವ್ಯ ಹೊಂದಿದ್ದ ಪೇಯಿಂಗ್ ಗೆಸ್ಟ್ ನ 5ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ.
ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದ ಸಾಫ್ಟ್ ವೇರ್ ಎಂಜಿನಿಯರ್ ರಿಶಬ್ ಶುಕ್ಲಾ ಆರೋಗ್ಯ ಸಮಸ್ಯೆಯಿಂದ ತೀವ್ರ ಖಿನ್ನತೆ ಅನುಭವಿಸುತ್ತಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶುಕ್ಲಾ ಸೋದರಿ ತಿಳಿಸಿದ್ದಾರೆ. ರಿಶಬ್ ಶುಕ್ಲಾ ಮಹಾರಾಷ್ಟ್ರದ ನಾಗ್ಪುರ ಮೂಲದವರಾಗಿದ್ದು ಕಳೆದ ಮೂರು ವರ್ಷಗಳಿಂದ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೊಗುರಿನಲ್ಲಿ ವಿಜಯ್ ಪೇಯಿಂಗ್ ಗೆಸ್ಟ್ ನಲ್ಲಿ ವಾಸಿಸುತ್ತಿದ್ದರು.
ನಿನ್ನೆ ಬೆಳಗ್ಗೆ 9.50ರ ಸುಮಾರಿಗೆ ಪೇಯಿಂಗ್ ಗೆಸ್ಟ್ ನ ಟೆರೇಸ್ ಮೇಲೆ ಹೋಗಿ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ರಿಶಬ್ ಕೆಳಗೆ ಬಿದ್ದಿದ್ದನ್ನು ಕಂಡು ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆಗಮಿಸಿದಾಗ ಪ್ರಾಣಪಕ್ಷಿ ಹಾರಿಹೋಗಿತ್ತು. ನಂತರ ಶವವನ್ನು ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು.
ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಯಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಶುಕ್ಲಾ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರ ಸೋದರಿ ದೂರಿನಲ್ಲಿ ತಿಳಿಸಿದ್ದಾರೆ. 
ಪೊಲೀಸರು ಶುಕ್ಲಾ ಅವರ ಕುಟುಂಬ ಸದಸ್ಯರು ಮತ್ತು ರೂಮ್ ಮೇಟ್ ಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಪೇಯಿಂಗ್ ಗೆಸ್ಟ್ ನ ಪ್ರವೇಶದಲ್ಲಿ ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com