ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ರಾಜ್ಯ
ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧ ಗೂಂಡಾಗಿರಿ ಆರೋಪ, ಆಪ್, ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ವ್ಯಕ್ತಿಯೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹ್ಯಾರಿಸ್ ರನ್ನು ಕೂಡಲೇ ಬಂಧಿಸುವಂತೆ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು: ವ್ಯಕ್ತಿಯೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹ್ಯಾರಿಸ್ ರನ್ನು ಕೂಡಲೇ ಬಂಧಿಸುವಂತೆ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಅವರ ನಿವಾಸ ಮತ್ತು ಮಲ್ಯಾ ಆಸ್ಪತ್ರೆ ಎದುರು ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತ ಗೃಹ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಹ್ಯಾರಿಸ್ ಪುತ್ರ ನಲಪಾಡ್ ಅವರನ್ನು ಬಂಧಿಸುವಂತೆ ಒತ್ತಾಯ ಹೇರಿದರು.
ಇತ್ತ ಹ್ಯಾರಿಸ್ ಅವರ ಮನೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಚದುರಿಸಲು ಮುಂದಾದರಾದರೂ ಇದಕ್ಕೆ ಬಗ್ಗದ ಪ್ರತಿಭಟನಾ ಕಾರರರು ಪ್ರತಿಭಟನೆ ಮುಂದುವರೆಸಿದರು.
ಹಲ್ಲೆ ಖಂಡನೀಯ, ಆರೋಪಿಗಳನ್ನು ಕೂಡಲೇ ಬಂಧಿಸಿ: ಯಡಿಯೂರಪ್ಪ
ಅತ್ತ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆದಿರುವಂತೆಯೇ ವಿದ್ವತ್ ಮೇಲಿನ ಹಲ್ಲೆಯನ್ನು ಖಂಡಿಸಿ ಟ್ಲೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಆರೋಪಿತ ಪುತ್ರ ಪೊಲೀಸರಿಗೆ ಶರಣಾಗುವಂತೆ ಶಾಸಕ ಎನ್ ಎ ಹ್ಯಾರಿಸ್ ಆತನ ಮನವೊಲಿಸಿ ಕರೆಚರಬೇಕು ಎಂದು ಹೇಳಿದ್ದಾರೆ.

