ನಿನ್ನೆ ಹಲ್ಲೆಗೊಳಗಾಗಿದ್ದ ವಿದ್ವತ್ ಚಿಕಿತ್ಸೆ ಪಡೆಯುತ್ತಿರುವ ಮಲ್ಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಶಾಸಕ ಹ್ಯಾರಿಸ್, ವಿದ್ವತ್ ಆರೋಗ್ಯ ವಿಚಾರಿಸಿದರು. ಬಳಿಕ ವಿದ್ವತ್ ಪೋಷಕರಿಗೆ ಸಾಂತ್ವನ ಹೇಳಿದ ಶಾಸಕ ಹ್ಯಾರಿಸ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಘಟನಾ ಸ್ಥಳದಲ್ಲಿ ಏನಾಯಿತು ಎಂದು ತಿಳಿದಿಲ್ಲ. ಆದರೆ ಇಂತಹ ಕೃತ್ಯ ಯಾರೇ ಮಾಡಿದರೂ ಅದು ತಪ್ಪು.. ನನ್ನ ಮಗನೋ ಅಥವಾ ಶಾಸಕನ ಮಗನೋ.. ಇದು ಯಾರೇ ಮಾಡಿದರೂ ತಪ್ಪೇ.. ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಹಲವು ಬಾರಿ ನನ್ನ ಮಗನಿಗೆ ಸಲಹೆ ನೀಡಿದ್ದೆ ಎಂದು ಹೇಳಿದ್ದಾರೆ.