ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿ ನಿಂತಿರುವ ಜೈನ ಯಾತ್ರಾ ಪಟ್ಟಣ ಶ್ರವಣಬೆಳಗೊಳ

ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಜ್ಜನ ನಡೆಯುವ ಶ್ರವಣಬೆಳಗೊಳ ನಗರಿ ಸೋಮವಾರ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಸಜ್ಜಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರವಣಬೆಳಗೊಳ: ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಜ್ಜನ ನಡೆಯುವ ಶ್ರವಣಬೆಳಗೊಳ ನಗರಿ ಸೋಮವಾರ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಸಜ್ಜಾಗಿದೆ. 
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋದಿಯವರು ಶ್ರವಣಬೆಳಗೊಳಕ್ಕೆ ಆಗಮಿಸಲಿದ್ದು ಅಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 50 ಬೆಡ್ ಗಳ ಬಾಹುಬಲಿ ಸಾರ್ವಜನಿಕ ಆಸ್ಪತ್ರೆಯನ್ನು ಪ್ರಧಾನಿ ಇಂದು ಉದ್ಘಾಟಿಸಲಿದ್ದಾರೆ. ಮಹಾಮಸ್ತಕಾಭಿಷೇಕ ನಡೆಯುವ ಎದುರು ನಿರ್ಮಿಸಲಾಗಿರುವ ಹೊಸ ಮೆಟ್ಟಿಲುಗಳನ್ನು ಕೂಡ ಉದ್ಘಾಟಿಸಲಿದ್ದಾರೆ.
ಮಹಾಮಸ್ತಕಾಭಿಷೇಕಕಕ್ಕೆ ಬಂದ ಭಕ್ತಾಧಿಗಳನ್ನು ಉದ್ದೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ಅವರ ಜೊತೆಗೆ ಕೇಂದ್ರ ಸಚಿವರುಗಳಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿಶೇಷ ರಕ್ಷಣಾ ಪಡೆ(ಎಸ್ ಪಿಜಿ) ತಂಡದ ಸಿಬ್ಬಂದಿ ಈಗಾಗಲೇ ದೇವಾಲಯದ ಬಳಿ ಬಂದು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಪ್ರಧಾನಿಯವರ ಭದ್ರತೆಗೆ ತಂಡದಲ್ಲಿ ವಿಶೇಷ ವಾಹನ ವ್ಯವಸ್ಥೆಯಿದೆ. ಹೊಟೇಲ್, ಲಾಡ್ಜ್, ಪಟ್ಟಣದ ಡಾಬಾಗಳಲ್ಲಿ ಕೂಡ ವಿಶೇಷ ಭದ್ರತಾ ಪಡೆ ಸಿಬ್ಬಂದಿ ಹೋಗಿ ತಪಾಸಣೆ ಮಾಡಿದ್ದಾರೆ.
ಸಂಚಾರ ದಟ್ಟಣೆ ನಿಯಂತ್ರಿಸಲು ಶ್ರವಣಬೆಳಗೊಳದಲ್ಲಿ ಪೊಲೀಸರು ಸಕಲ ವ್ಯವಸ್ಥೆಗಳನ್ನು ಮಾಡಿದ್ದು ಕೆಲವು ಪ್ರದೇಶಗಳಲ್ಲಿ ಬೂತ್ ಗಳನ್ನು ನಿರ್ಮಿಸಲಾಗಿದೆ. ಭಕ್ತರಿಗೆ ದೊಡ್ಡದಾದ ವಾಹನ ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಚಾವುಂಡರಾಯ ಮಂಟಪದಲ್ಲಿ ಮೋದಿಯವರು ಅಪಾರ ಸಂಖ್ಯೆಯ ಭಕ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ತಿಂಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಪ್ರಧಾನಿ ಜೊತೆ ಶ್ರವಣಬೆಳಗೊಳದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆಯಿದೆ.
ಪ್ರಧಾನಿಯವರನ್ನು ಸ್ವಾಗತಿಸುವುದಕ್ಕೆ ಸಂತೋಷವಾಗುತ್ತಿದೆ ಎಂದು ಶ್ರವಣಬೆಳಗೊಳದ ಪ್ರಧಾನ ಮಠಾಧೀಶ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.ಸಂಸ್ಕೃತಿ ಸಚಿವಾಲಯ ಮೂಲಕ ಕೇಂದ್ರ ಸರ್ಕಾರ ವಿಂಧ್ಯಗಿರಿ ಬೆಟ್ಟಕ್ಕೆ ಹತ್ತಲು ಹೊಸ ಮೆಟ್ಟಿಲುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸಿದೆ. ಹೊಸ ಮೆಟ್ಟಿಲುಗಳ ಸ್ಥಾಪನೆ ವಿಂಧ್ಯಗಿರಿ ಬೆಟ್ಟಕ್ಕೆ ಹತ್ತಿ ಅಲ್ಲಿ ಪೂಜೆ ಮಾಡಿಸುವವರಿಗೆ ತುಂಬಾ ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com