ಬಿಬಿಎಂಪಿ ಕಚೇರಿಗೆ ನುಗ್ಗಿ ಧಮ್ಕಿ: ಕಾಂಗ್ರಸ್ ನಿಂದ ಮುಖಂಡ ನಾರಾಯಣಸ್ವಾಮಿ ಉಚ್ಚಾಟನೆ

ಬಿಬಿಎಂಪಿ ಕಚೇರಿಗೆ ನುಗ್ಗಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿಯನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬಿಬಿಎಂಪಿ ಕಚೇರಿಗೆ ನುಗ್ಗಿ ಧಮ್ಕಿ ಹಾಕಿದ ನಾರಾಯಣಸ್ವಾಮಿ
ಬಿಬಿಎಂಪಿ ಕಚೇರಿಗೆ ನುಗ್ಗಿ ಧಮ್ಕಿ ಹಾಕಿದ ನಾರಾಯಣಸ್ವಾಮಿ

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿಯನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಉಚ್ಚಾಚಿಸಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ನಾರಾಯಣ ಸ್ವಾಮಿ ಹೊರಮಾವು  ಬಿಬಿಎಂಪಿ  ಕಚೇರಿಗೆ ಪೆಟ್ರೋಲ್ ಸುರಿದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೇ,ಕಚೇರಿಯ ಕಡತಗಳಿರುವ ಕವಾಟಿಗೆ ಪೆಟ್ರೋಲ್ ಎರಚಿದರು ಎಂದು ತಿಳಿದುಬಂದಿದೆ.

ಏತನ್ಮಧ್ಯೆ ಪ್ರಕರಣ ಸಂಬಂಧ ಮಾಧ್ಯಮ ವರದಿ ಕುರಿತು ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದು, ಅವಶ್ಯಕತೆ ಇದ್ದರೆ ನಾರಾಯಣಸ್ವಾಮಿ  ಅವರನ್ನು ಬಂಧಿಸಿ, ಕೂಡಲೇ ಕಾನೂನು ರೀತಿ ಕ್ರಮ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

 ಈ ಸಂಬಂಧ ಧಮ್ಕಿಕ್ಕೊಳಗಾದ ಅಧಿಕಾರಿ ಯಾರಪ್ಪ ಪಾಲಿಕೆ ಜಂಟಿ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.  ನನ್ನಗೆ  ಜೀವ ಬೆದರಿಕೆ ಇದ್ದ   ಕಾರಣಕ್ಕೆ ಪೊಲೀಸರಿಗೆ ದೂರು ನೀಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಡಾ. ವಾಸಂತಿ ಅಮರ್ ಅವರಿಗೆ ವರದಿ ಸಲ್ಲಿಸಿದ್ದಾರೆ.

ಈ ಮಧ್ಯೆ ಪೊಲೀಸರು ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಳ್ಳಲು  ಚಿಂತನೆ ನಡೆಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com