ಬೆಂಗಳೂರು-ಮೈಸೂರು ಷಟ್ಪಥ ಹೆದ್ದಾರಿ ಯೋಜನೆಗೆ ಕೇಂದ್ರದಿಂದ ರು. 2,920 ಕೋಟಿ

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ 275 ವಿಸ್ತರಣೆಗೆ 2,920 ಕೋಟಿ ರುಪಾಯಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ 275 ವಿಸ್ತರಣೆಗೆ 2,920 ಕೋಟಿ ರುಪಾಯಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ 6 ಪಥದ ನಿಡಗಟ್ಟ -ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಅನ್ನು 74 ಕಿ.ಮೀ.ನಿಂದ 135 ಕಿ.ಮೀ ವರೆಗೆ ಅಭಿವೃದ್ಧಿ ಪಡಿಸಲು ಒಪ್ಪಿಗೆ ಸೂಚಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಭೂಸ್ವಾಧೀನ ಹಾಗೂ ಕಾಮಗಾರಿ ಪೂರ್ವ ಚಟುವಟಿಕೆಗಳಿಗಾಗಿ 81 ಕೋಟಿ ರುಪಾಯಿ ಮೀಸಲಿಡಲಾಗಿದೆ.
ಒಟ್ಟು 61 ಕಿ.ಮೀ ಆರು ಪಥದ ಹೆದ್ದಾರಿ ಅಭಿವೃದ್ಧಿ ಅಂದಾಜು 2,919 ಕೋಟಿ ರುಪಾಯಿ ವೆಚ್ಚವಾಗಲಿದ್ದು, ಈ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com