ಬೆಂಗಳೂರು: ಎಂಬಿಎ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಳಪಾಡ್ ವಿರುದ್ಧ ಸೆಕ್ಷನ್ 307ರ ಅಡಿಯಲ್ಲಿ ಕೊಲೆಯತ್ನದ ಕೇಸ್ ದಾಖಲಿಸಲಾಗಿದೆ.
ಹಲವು ಗಂಟೆಗಳ ಹೈಡ್ರಾಮಾದ ನಂತರ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ, ಇಂಡಿಯನ್ ಪೀನಲ್ ಕೋಡ್, 341, 506, 143 ಮತ್ತು 144, 146 ಮತ್ತು 147 ಹಾಗೂ 326 ಹಾಗೂ 504 ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಚಂದ್ರಗುಪ್ತ ತಿಳಿಸಿದ್ದಾರೆ,
ಬೌರಿಂಗ್ ಆಸ್ಪತ್ರೆಯಲ್ಲಿ ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಯನ್ನು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಯುಬಿ ಸಿಟಿಯ ‘ಫರ್ಜಿ ಕೆಫೆ’ಯಲ್ಲಿ ಫೆ. 17ರಂದು ವಿದ್ವತ್ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಕೇಸ್ ದಾಖಲಾಗುತ್ತಿದ್ದಂತೆ ಮೊಹಮದ್ ನಾಪತ್ತೆಯಾಗಿದ್ದರು.
ಆರೋಪಿಯನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕಬ್ಬನ್‌ಪಾರ್ಕ್ ಠಾಣೆಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.