ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿ-ಅಂಬಾರಗೊಡ್ಲು ನಡುವೆ ನಿರ್ಮಾಣವಾಗಲಿರುವ ರೂ.600 ಕೋಟಿ ವೆಚ್ಚದ ರಾಜ್ಯದ 2ನೇ ಅತಿ ಉದ್ದದ ಸಿಗಂದೂರು (ತುಮರಿ) ಸೇತುವೆ ಸೇರಿ ಹಲವು ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಚಾಲನೆ ನೀಡಿ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು, ಚೆನ್ನೈ-ಬೆಂಗಳೂರು, ಹೈದರಾಬಾದ್-ಬೆಂಗಳೂರು ರಸ್ತೆಯನ್ನು ಎಕ್ಸ್'ಪ್ರೆಸ್ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಬೆಂಗಳೂರು ಮತ್ತು ಮೈಸೂರು ನಡುವೆ 117 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.7 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಬೆಂಗಳೂರು-ಅಮರಾವತಿ-ಹೈದರಾಬಾದ್ ನಡುವೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೂ ಯೋಜನೆ ರೂಪಿಸಲಾಗಿದೆ. ಮುಂದಿನ 2 ವರ್ಷದೊಳಗೆ ರಸ್ತೆ ಅಭಿವೃದ್ಧಿಗಾಗಿ ರಾಜ್ಯಕ್ಕೆ ರೂ.2 ಲಕ್ಷ ಕೋಟಿ ಅನುದಾನ ಒದಗಿಸಲಾಗುವುದು ಎಂದು ಹೇಳಿದ್ದಾರೆ.