ಮಲ್ಲಿಕಾರ್ಜುನ ಖರ್ಗೆಗೆ ‘ಜಯದೇವ ಶ್ರೀ’ ಪ್ರಶಸ್ತಿ

ಸಂಸದ, ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಿತ್ರದುರ್ಗದ ಮುರುಘಾ ಮಠದ ಬಸವಕೇಂದ್ರ, ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ನೀಡುವ ಜಯದೇವಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
ಚಿತ್ರದುರ್ಗ: ಸಂಸದ, ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಿತ್ರದುರ್ಗದ ಮುರುಘಾ ಮಠದ ಬಸವಕೇಂದ್ರ, ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ನೀಡುವ ಜಯದೇವಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
 ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ 61ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದಲ್ಲಿ ಮಾರ್ಚ್ 3ರಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.
ರಾಜಕಾರಣಿಯಾಗಿ ಸುದೀರ್ಘ ಕಾಲ ಸಮಾಜ ಸೇವೆ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರ ಜೀವಮಾನದ ಸಾಧನೆ ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಇದೇ ವೇಳೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ  ಸಾಹಿತಿ ನಾಡೋಜ ಹಂ.ಪ. ನಾಗರಾಜಯ್ಯ ಅವರಿಗೆ ‘ಶೂನ್ಯಪೀಠ ಅಲ್ಲಮ’ ಪ್ರಶಸ್ತಿ,, ಮಹಿಳಾ ಪರ ಹೋರಾಟಗಾರ್ತಿ  ಪ್ರಮೀಳಾ ನೇಸರ್ಗಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ, ದಾವಣಗೆರೆಯ ಸಮಾಜ ಸೇವಕ ಡಾ.ಸಿ.ಆರ್.ನಸಿರ್ ಅಹಮ್ಮದ್ ಅವರಿಗೆ  ‘ಶೂನ್ಯಪೀಠ ಚನ್ನಬಸವ’ ಪ್ರಶಸ್ತಿ ಪ್ರಕಟಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com