ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ವಿಜಯಾ ದಬ್ಬೆ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.
ಅತಿಮಬ್ಬೆ ಪ್ರಶಸ್ತಿ ಪುರಸ್ಕೃತರಾದ ವಿಜಯಾ ದಬ್ಬೆ ಅವರು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಅಮೂಲ್ಯ ಕೊಡುಗೆಗಳನ್ನು ನೀಡಿದ್ದು ರಾಜ್ಯದ ಪ್ರಮುಖ ಮಹಿಳಾ ಸಾಹಿತಿಗಳಲ್ಲಿ ಒಬ್ಬರಾಗಿದ್ದರು.
ವಿಜಯಾ ದಬ್ಬೆ ಅವರ ನಿಧನಕ್ಕೆ ನಾಡಿನ ಸಾಹಿತಿಗಳು, ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.