ಸೀರೆ ಹಂಚಿಕೆ ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಕೈ ಕಟ್!
ಸೀರೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಎದುರಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಕೈ ಕಟ್ ಆಗಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿಯ ಹೋಬಳಿ ವ್ಯಾಪ್ತಿಯ ಆರ್ಕುಂದ ಗ್ರಾಮದಲ್ಲಿ ಗುರುವಾರ ನಡೆದಿದೆ...
ಚಿಕ್ಕಬಳ್ಳಾಪುರ: ಸೀರೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಎದುರಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಕೈ ಕಟ್ ಆಗಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿಯ ಹೋಬಳಿ ವ್ಯಾಪ್ತಿಯ ಆರ್ಕುಂದ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ್ ಸಂತ್ರಸ್ತ ವ್ಯಕ್ತಿಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಾಗಿರುವ ಲೋಕೇಶ್ ಕುಮಾರ್ ಎಂಬಾತ ನಿನ್ನೆ ರವಿಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಚ್ಚಿನಿಂದ ನಡೆಸಿದ ಹಲ್ಲೆ ವೇಳೆ ರವಿಕುಮಾರ್ ಅವರ ಎಡಗೈ ತುಂಡಾಗಿದೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ರವಿಕುಮಾರ್ ಅವರನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.