ಮೊಹಮ್ಮದ್ ಹ್ಯಾರೀಸ್ ನಳಪಾಡ್
ರಾಜ್ಯ
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಫೆ.26ಕ್ಕೆ ಮುಂದೂಡಿಕೆ
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಇಂದು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರು, ನಲಪಾಡ್ ಜಾಮೀನು ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 26ಕ್ಕೆ ಮುಂದೂಡಿದ್ದಾರೆ.
ಇನ್ನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ನ್ಯಾಯಾಲಯವನ್ನು ಕೋರಿದ್ದು ಈ ಕೋರಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಫೆಬ್ರವರಿ 26ರಂದು ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ವಾದ ಆಲಿಸಬೇಕೇ, ಬೇಡವೇ ಎಂಬುದನ್ನು ಪರಿಗಣಿಸಲು ಆದೇಶ ಮುಂದೂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ