ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನ ಬಂಡಲ್ ಷಾ ಎಂಬ ಪೋಸ್ಟ್ನ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕಳೆದ ಮಂಗಳವಾರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮ ನಡೆದಿತ್ತು. ವಿವೇಕಾನಂದ ಅಂತಿಮ ವರ್ಷದ ಕಾನೂನು ಕಾಲೇಜಿನ ವಿದ್ಯಾರ್ಥಿಯೊಬ್ಬ 'ಬಂಡಲ್ ಷಾ' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಆ ವಿದ್ಯಾರ್ಥಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ನಿರ್ವಹಿಸುತ್ತಿರುವ ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿ ಜಸ್ಟೀನ್ ನನ್ನು ಕಾಲೇಜು ಆಡಳಿತ ಮಂಡಳಿ 15 ದಿನ ಅಮಾನತುಗೊಳಿಸಿದೆ.
ಆದರೆ ಈ ಆರೋಪವನ್ನು ನಿರಾಕರಿಸಿರುವ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಯನ್ನು ಅಮಾನತುಗೊಳಿಸಿಲ್ಲ, ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದೆ.