ಏಪ್ರಿಲ್ 15ರ ಬಳಿಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಒಪಿ ರಾವತ್

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್‌ ಹೇಳಿದರು.
ಏಪ್ರಿಲ್ 15ರ ಬಳಿಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಒಪಿ  ರಾವತ್
ಏಪ್ರಿಲ್ 15ರ ಬಳಿಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಒಪಿ ರಾವತ್
ನವದೆಹಲಿ:  ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ  ಒ.ಪಿ. ರಾವತ್‌ ಹೇಳಿದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ರಾವತ್ ಈ ಹೇಳಿಕೆ ನೀಡಿದ್ದಾರೆ.
"ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಮಧ್ಯಭಾಗದೊಳಗೆ ಎಲ್ಲಾ ಶಾಲಾ, ಕಾಲೇಜು ಮಟ್ಟದ ಪರೀಕ್ಷೆಗಳು ಕೊನೆಗೊಳ್ಳಲಿದ್ದು ಆ ಬಳಿಕ ಚುನಾವಣೆಗೆ ದಿನಾಂಕ ನಿಗದಿಪಡಿದಲಾಗುತ್ತದೆ" ರಾವತ್‌ ಹೇಳಿದ್ದಾರೆ.
ಏಪ್ರಿಲ್ ತಿಂಗಳ ಮೊದಲ ವಾರ ಚುನಾವಣಾ ಆಯೋಗದ ಅಧಿಕಾರಿಗಳು ಕರ್ನಾಟಕಕ್ಕೆ ಭೇಟಿ ನೀಡಲಿದ್ದು ಚುನಾವಣಾ ಸಂಬಂಧ ಅಂತಿಮ ಸಿದ್ದತೆಗಳ ಬಗೆಗೆ ಪರಿಶೀಲನೆ ನಡೆಸಲಿದ್ದಾರೆ. ಇದಾದ ಬಳಿಕ ಸೂಕ್ತ ಸಲಹೆಗಳನ್ನು ಪಡೆದು ಎರಡನೇ ವಾರದ ವೇಳೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪ್ರಸ್ತುತ ವಿಧಾನ ಸಭೆ ಅಧಿಕಾರದ ಅವಧಿಯು ಮೇ 28ಕ್ಕೆ ಅಂತ್ಯಗೊಳ್ಳಲಿದ್ದು ಅಷ್ಟರಲ್ಲಿ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾಗಬೇಕಿದೆ.
ಪ್ರಸ್ತುತ ಕಾಂಗ್ರೆಸ್ ಆಳ್ವಿಕೆಯಲ್ಲಿರುವ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಲು ಪ್ರಯತ್ನ ನಡೆಸಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಈ ಸಂಬಂಧ ಬಲವಾದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದೇ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ರಾಜ್ಯ ಪ್ರವಾಸ ಕೈಗೊಂಡು ಜನರ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com