ವಿಕೃತ ಕಾಮಿ ಸೈಕೋ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು

ಪೊಲೀಸ್ ಪೇದೆಯ ಪತ್ನಿ ಸೇರಿ 19ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ವೆಸಗಿದ್ದ ವಿಕೃತ ಕಾಮಿ ಸೈಕೋ ಜೈ ಶಂಕರ್ ಸೋಮವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಆತ್ಯಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಪೊಲೀಸ್ ಪೇದೆಯ ಪತ್ನಿ ಸೇರಿ 19ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ವೆಸಗಿದ್ದ ವಿಕೃತ ಕಾಮಿ ಸೈಕೋ ಜೈ ಶಂಕರ್ ಸೋಮವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಆತ್ಯಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಪರಪ್ಪನ ಅಗ್ರಹಾರ ಬಳಿ ಇರುವ ಕೇಂದ್ರ ಕಾರಾಗೃಹದಲ್ಲಿ ಸಜಾ ಖೈದಿಯಾಗಿದ್ದ ವಿಕೃತ ಕಾಮಿ ಸೈಕೋ ಜಯಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ರಾತ್ರಿ 2 ಗಂಟೆ ಸುಮಾರಿನಲ್ಲಿ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ವಿಚಾರ ತಿಳಿದ ಕೂಡಲೇ ಜೈಶಂಕರ್’ ನನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ದಾರಿಯ ಮಧ್ಯೆ ಜೈಶಂಕರ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ ಎರಡು ವರ್ಷಗಳ ಹಿಂದೆ ಜೈಲಿನಿಂದ ಎಸ್ಕೇಪ್ ಅಗಲು ಪ್ರಯತ್ನಿಸಿ  ಜೈಲಿನ ರಕ್ಷಣಾ ಗೋಡೆ ಹಾರಿ ಸೊಂಟ ಮುರಿದುಕೊಂಡಿದ್ದ ಜೈಶಂಕರ್ ಬಳಿಕ ಜೈಲಿನಲ್ಲೇ ಚಿಕಿತ್ಸೆ ಪಡೆದಿದ್ದ. ಇತ್ತೀಚೆಗೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಶಂಕರನಿಗೆ ಪ್ರತ್ಯೇಕ ಸೆಲ್ ನೀಡಲಾಗಿತ್ತು.  ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಕುಖ್ಯಾತಿಗಳಿಸಿದ್ದ ಜೈಶಂಕರ್ 19 ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ. 
ತಮಿಳುನಾಡಿನ ಸೇಲಂ ಮೂಲದವನಾದ ಸೈಕೋ ಜೈಶಂಕರ್ ಕೊಯಮತ್ತೂರಿನಲ್ಲಿ ಲಾರಿಚಾಲಕನಾಗಿ ಕೆಲಸ ಮಾಡುತ್ತಿದ್ದ.  ಪೊಲೀಸ್ ಪೇದೆಯ ಪತ್ನಿಯನ್ನೇ ಅತ್ಯಾಚಾರ ಎಸಗಿದ್ದ ಪ್ರಕರಣ ಸೇರಿದಂತೆ ತಮಿಳುನಾಡಿನಲ್ಲಿ 11 ಮಹಿಳೆಯರು , ಕರ್ನಾಟಕದ ಲ್ಲಿ 4 ಮಹಿಳೆಯರ ಅತ್ಯಾಚಾರ, ಕೊಲೆ ಪ್ರಕರಣಗಳು ಈತನ ವಿರುದ್ಧ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com