ಬಿಸಿಯೂಟ ತಯಾರಕರ ವೇತನ ರೂ.500 ಹೆಚ್ಚಳ ಸಾಧ್ಯತೆ

ರಾಜ್ಯ ಬಿಸಿಯೂಟ ಕಾರ್ಯಕರ್ತೆಯರ ವೇತನದಲ್ಲಿ ರೂ.500 ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ರಾಜ್ಯ ಬಿಸಿಯೂಟ ಕಾರ್ಯಕರ್ತೆಯರ ವೇತನದಲ್ಲಿ ರೂ.500 ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳ ಕುರಿತಂತೆ ಅಧಿಕಾರಿಗಳು ಮುಖ್ಯಮಂತ್ರಿಗಳ ಕಚೇರಿಯೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲಿಯೇ ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ ಇಲಾಖೆ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಮಾಹಿತಿ ನೀಡಿವೆ. 
ಈವರೆಗೆ ಬಿಸಿಯೂಟ ಕಾರ್ಯಕರ್ತೆಯರಿಗೆ ಸರ್ಕಾರ ರೂ.2,200 ವೇತನ ನೀಡುತ್ತಿತ್ತು. ಇದೀಗ ಆ ವೇತನವನ್ನು ರೂ.2,700ಕ್ಕೆ ಏರಿಕೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಅನುಮತಿಗಾಗಿ ಕಡತವನ್ನು ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. 
ರಾಜ್ಯದಲ್ಲಿ 48,565 ಮುಖ್ಯ ಅಡುಗೆ ಸಿಬ್ಬಂದಿ ಹಾಗೂ 69,634 ಸಹಾಯಕ ಅಡುಗೆ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ರೂ.3000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಕೆಲ ದಿನಗಳ ಹಿಂದಷ್ಟೇ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾರ್ಯಕರ್ತೆಯರು ಭಾರೀ ಪ್ರತಿಭಟನೆಯನ್ನು ನಡೆಸಿದ್ದರು. ಬಳಿಕ ರಾಜ್ಯ ಬಜೆಟ್ ಮಂಡನೆ ವೇಳೆ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದಿದ್ದರು. ಇದೀಗ ಬಿಸಿಯೂಟ ಕಾರ್ಯಕರ್ತೆಯರ ವೇತನ ರೂ.500 ಹೆಚ್ಚಲವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com