ವಿಶ್ವದ ಅತಿ ದೊಡ್ಡ ಸೌರ ಪಾರ್ಕ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಪಾವಗಡ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿರುವ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದ್ದಾರೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ತುಮಕೂರು: ಪಾವಗಡ ತಾಲೂಕಿನಲ್ಲಿ ನಿರ್ಮಾಣ  ಮಾಡಲಾಗಿರುವ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದ್ದಾರೆ.
ಮೊದಹ ಹಂತದ ತಿರುಮಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ 600 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ತಿರುಮಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಯಚರ್ಲು, ವಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವೆಂಕಟಮ್ಮನಹಳ್ಳಿ, ಕ್ಯಾತಗಾನಚೆರ್ಲು ಬಳಸಮುದ್ರ ಸೇರಿ ಒಟ್ಟು 5 ಗ್ರಾಮಗಳ 13,000 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸೌರಶಕ್ತಿ ಘಟಕ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. 
ಸೌರ ಪಾರ್ಕ್ ರೂ.16 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ರೈತರಿಂದ 25 ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ಭೂಮಿಯನ್ನು ಪಡೆಯಲಾಗಿದೆ. ಸತತ 40 ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ಪಾವಗಡದಲ್ಲಿ ಸ್ಥಳೀಯವಾಗಿ ಸಂಪನ್ಮೂಲ ಕ್ರೋಢೀಕರರಿಸಬೇಕೆಂಬ ಉದ್ದೇಶದಿಂದ ಈ ಪಾರ್ಕ್'ನ್ನು ನಿರ್ಮಿಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com