ಹೊಸ ತಂತ್ರಜ್ಞಾನದೊಂದಿಗೆ ಇವಿಎಂ ಬಳಸುವ 7ನೇ ರಾಜ್ಯ ಕರ್ನಾಟಕ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಗಳನ್ನು ಬಳಸುವ ಮೂಲಕ ವಿದ್ಯುನ್ಮಾನ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಗಳನ್ನು ಬಳಸುವ ಮೂಲಕ ವಿದ್ಯುನ್ಮಾನ ಮತ ಯಂತ್ರ ಬಳಕೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಏಳನೇ ಸ್ಥಾನ ಹೊಂದಿದೆ.

ರಾಜ್ಯದ 56,694 ಮತಕೇಂದ್ರಗಳಿಗೆ 73,850 ವಿವಿಪ್ಯಾಟ್ ಯಂತ್ರಗಳನ್ನು ಪಡೆದುಕೊಂಡಿದ್ದೇವೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ನಿನ್ನೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಆದೇಶದ ಪ್ರಕಾರ, ಚುನಾವಣಾ ಪ್ರಕ್ರಿಯೆಗಳು ಪಾರದರ್ಶಕವಾಗಿ ನಡೆಯಲು ವಿವಿಪ್ಯಾಟ್ ಗಳನ್ನು ಜಾರಿಗೆ ತಂದಿದ್ದೇವೆ. ಅತ್ಯಾಧುನಿಕ ವಿದ್ಯುನ್ಮಾನ ಮತಯಂತ್ರವಾದ ಎಂ3 ಇವಿಎಂಗಳನ್ನು ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತದೆ. ವಿವಿಪ್ಯಾಟ್ ಗಳ ಬಳಕೆ ಮೂಲಕ ಮತದಾನ ಸಿಬ್ಬಂದಿಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com