ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯ: ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಎನ್'ಟಿಸಿಎ ಸೂಚನೆ

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ...
ಕಾಳಿ ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಭಿವೃದ್ಧಿ ಯೋಜನೆಗಳ ಕಾರ್ಯ ನಡೆಯುತ್ತಿರುವುದು
ಕಾಳಿ ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಭಿವೃದ್ಧಿ ಯೋಜನೆಗಳ ಕಾರ್ಯ ನಡೆಯುತ್ತಿರುವುದು
ಬೆಂಗಳೂರು: ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ. 
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮವಾಗಿ ರಸ್ತೆ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿತ್ತು. ಈ ಬಗ್ಗೆ ಎನ್'ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ)ಕ್ಕೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. 
ಈ ಹಿನ್ನಲೆಯಲ್ಲಿ ಪ್ರಕಣವನ್ನು ಗಂಭೀರವಾಗಿ ಪರಿಗಣಿಸಿರುವ ಎನ್'ಟಿಸಿಎ ಅಕ್ರಮ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಪರಿಶೀಲನೆ ನಡೆಸಿ 30 ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಟ್ಟು 8 ಅಭಿವೃದ್ಧಿ ಯೋಜನೆಗಳ ಕಾರ್ಯಗಳು ನಡೆಯುತ್ತಿದ್ದು, ಇದರಲ್ಲಿ ಕೆಲವು ಯೋಜನೆಗಳ ಕಾರ್ಯ ಈಗಾಗಲೇ ಪೂರ್ಣಗೊಂಡಿವೆ. ಪ್ರಸ್ತುತ ಪ್ರಗತಿಯಲ್ಲಿಯುವ ಕಾರ್ಯಗಳನ್ನು ಕೂಡಲೇ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com