ಜ.15ರಿಂದ ಶಿರಾಡಿ ಘಾಟ್'ನಲ್ಲಿ ವಾಹನ ಸಂಚಾರ ಬಂದ್

ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಿರಡಿ ರಸ್ತೆಯಲ್ಲಿ ಜ.15 ರಿಂದ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಮಂಗಳೂರು: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಿರಾಡಿ ರಸ್ತೆಯಲ್ಲಿ ಜ.15 ರಿಂದ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಎಸ್. ಶಶಿಕಾಂತ್ ಸೆಂದಿಲ್ ಮತ್ತು ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಂ.ಒ ರಮೇಶ್ ಅವರು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ್ದು, ಶಿರಾಡಿ ಘಾಟ್'ನಲ್ಲಿ ಬಾಕಿ ಉಳಿದಿರುವ 13 ಕಿ.ಮೀ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಈ ಹಿನ್ನಲೆಯಲ್ಲಿ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದೆ. ಪರಿಶೀಲನೆ ಬಳಿಕ ವರದಿಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಂ.ಒ ರಮೇಶ್ ಅವರು, ಜಿಲ್ಲಾ ಸಚಿವ ಬಿ ರಾಮನಾಥ ರೈ ಅವರ ನಿರ್ದೇಶನದಂತೆಯೇ, ಜಂಟಿ ಪರಿಶೀಲನೆ ಪೂರ್ಣಗೊಂಡಿದೆ. ವರದಿಯ ಶಿಫಾರಸ್ಸಿನಂತೆಯೇ ಪಿಡಬ್ಲ್ಯೂಡಿ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com