ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಮಧ್ಯಾಹ್ನ 1:30 ರ ವೇಳೆಗೆ ದೀಪಕ್ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಯುವಕರ ಗುಂಪೊಂದು ಅಡ್ಡ ಹಾಕಿತ್ತು. ದೀಪಕ್ ತಪ್ಪಿಸಿಕೊಳ್ಳುವುದಕ್ಕೂ ಮುನ್ನ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ದಾಳಿಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೀಪಕ್ ನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಹೇಳಿದ್ದಾರೆ.