ಬೆಂಗಳೂರು: ಬನ್ನೇರುಘಟ್ಟದಲ್ಲಿ ಯುವಕನ ಭೀಕರ ಕಗ್ಗೊಲೆ

ನಡು ರಸ್ತೆಯಲ್ಲೇ ಯುವಕನನ್ನು ಅಡ್ಡಗಟ್ಟಿ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸತೀಶ್ ರೆಡ್ಡಿ
ಸತೀಶ್ ರೆಡ್ಡಿ
Updated on: 
ಬೆಂಗಳೂರು: ನಡು ರಸ್ತೆಯಲ್ಲೇ ಯುವಕನನ್ನು ಅಡ್ಡಗಟ್ಟಿ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 
ಸತೀಶ್ ರೆಡ್ಡಿ(28) ಕೊಲೆಗೀಡಾದ ದುರ್ದೈವಿಯಾಗಿದ್ದು ಈತ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನಿವಾಸಿ ಎನ್ನಾಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ತನ್ನ ಪತ್ನಿಯನ್ನು ಇಂದು ಬೆಳಗ್ಗೆ ಬಿಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಎರಡು ಬೈಕ್‍ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸತೀಶ್ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬಿಡದೆ ಅಟ್ಟಾಡಿಸಿಕೊಂಡು ಬಂದ ಆಗಂತುಕರು ಹುಲುವಳ್ಳಿಯ ಬಳಿಯ ರಸ್ತೆಯಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾರೆ.
ಸತೀಶ್ ಜಯಕರ್ನಾಟಕ ಸಂಘಟನೆ ಸೇರಿ ಹಲವು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರೆನ್ನ್ಲಾಗಿದೆ. ಅಲ್ಲದೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆಪ್ತವಲಯದಲ್ಲಿ ಸಹ ಹೆಸರಾಗಿದ್ದರೆಂದು ಹೇಳಲಾಗಿದೆ.
ಸ್ಥಳೀಯರಿಂದ ಮಾಹಿತಿ ಪಡೆದ ಪೋಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ದ್ವೇಷದಿಂದಲೇ ಕೃತ್ಯ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು  ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಪೋಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com