ಗೋಪಾಲ್ ತಮ್ಮ ವೃತ್ತಿಜೀವನದಲ್ಲಿ ಮೊದಲಿನಿಂದಲೂ ಪ್ರಕರಣಗಳ ತುರ್ತು ವಿಲೇವಾರಿಗೆ ಹೆಸರಾಗಿದ್ದಾರೆ. ಉದಾಹರಣೆಗೆ, ಅವರು ಬೆಳಗಾವಿ ಕೌಟುಂಬಿಕ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದಾಗ, ಪ್ರತಿ ತಿಂಗಳು 140-180 ಪ್ರಕರಣಗಳನ್ನು ಇತ್ಯರ್ಥಗೊಳಿಸುತ್ತಿದ್ದರು. ಅವುಗಳಲ್ಲಿ ವಿಚ್ಛೇದನದ, ಸಂಬಂಧಗಳ ನಿರ್ವಹಣೆ, ಜೀವನಾಂಶ, ಇತ್ಯಾದಿ ಪ್ರಕರಣ ಸೇರಿದ್ದವು. ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಕೆಲಸ ಮಾಡಿದ್ದಾಗ ಕೂಡ, ನ್ಯಾಯಾಧೀಶರು 18 ತಿಂಗಳ ಅಧಿಕಾರಾವಧಿಯಲ್ಲಿ ಶೇ.70 ಪ್ರಕರಣಗಳಲ್ಲಿ ಆರೋಪಿಗಳನ್ನು ಶಿಕ್ಷಿಸುವ ಮೂಲಕ ಬಲವಾದ ಸಂದೇಶವನ್ನು ನೀಡಿದ್ದರು.