ವಿದೇಶಿ ವಿದ್ಯಾರ್ಥಿಗಳಿಗೆ ಕರ್ನಾಟಕವೇ ಎಲ್ಲಕ್ಕಿಂತ ಅಚ್ಚುಮೆಚ್ಚಿನ ರಾಜ್ಯ

ಕರ್ನಾಟಕ ರಾಜ್ಯ ದೇಶದಲ್ಲಿ ಅತಿ ಹೆಚ್ಚು ಮಂದಿ ವಿದೇಶಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ರಾಜ್ಯ ಎಂದು ಗುರುತಿಸಿಕೊಂಡಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯ ದೇಶದಲ್ಲಿ ಅತಿ ಹೆಚ್ಚು ಮಂದಿ ವಿದೇಶಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ರಾಜ್ಯ ಎಂದು ಗುರುತಿಸಿಕೊಂಡಿದೆ. ಆದರೂ ಕೂಡ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ವರ್ಷ ರಾಜ್ಯಕ್ಕೆ ಅಧ್ಯಯನ ಮಾಡಲೆಂದು ಬಂದ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. 
ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವದೇಕರ್ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣಗಳ ಅಖಿಲ ಭಾರತ ಸಮೀಕ್ಷೆ(ಎಐಎಸ್ಎಸ್ಇ)-2016-17ರ ಪ್ರಕಾರ, ಕರ್ನಾಟಕ ರಾಜ್ಯದಲ್ಲಿ ವಿವಿಧ ಕೋರ್ಸ್ ಗಳಿಗೆ 13,050 ವಿದೇಶಿ ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಂಡಿದ್ದಾರೆ. ದೇಶಾದ್ಯಂತ ವಿವಿಧ ಕಾಲೇಜುಗಳಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾತಿ ಮಾಡಿಕೊಂಡ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷ 47,575 ಆಗಿದೆ.
ಆದರೆ 2015-16ರ ಅಂಕಿಅಂಶ ಪ್ರಕಾರ, ವಿದೇಶಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕಳೆದ ವರ್ಷ ಕಡಿಮೆಯಾಗಿದೆ. 2015-16ರಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ 14,348 ಆಗಿದ್ದು ಕರ್ನಾಟಕ ರಾಜ್ಯದಲ್ಲಿ 1,290 ವಿದೇಶಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾತಿ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ 2015-16ರಲ್ಲಿ 1,785 ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಂಡಿದ್ದರೆ 2016-17ರಲ್ಲಿ 2,347 ಆಗಿದೆ.
ಭಾರತಕ್ಕೆ ಅಧ್ಯಯನಕ್ಕೆ ಆಗಮಿಸುವ ವಿದೇಶಿ ವಿದ್ಯಾರ್ಥಿಗಳಲ್ಲಿ ಅಧಿಕ ಮಂದಿ ನೇಪಾಳೀಯರಾಗಿದ್ದು, ಶೇಕಡಾ 23.6ರಷ್ಟಿದ್ದಾರೆ. ನಂತರದ ಸ್ಥಾನದಲ್ಲಿ ಆಫ್ಘಾನಿಸ್ತಾನದಿಂದ ಶೇಕಡಾ 9.3ರಷ್ಟು, ಭೂತಾನ್ ನಿಂದ ಶೇಕಡಾ 4.8ರಷ್ಟು ವಿದ್ಯಾರ್ಥಿಗಳು ಆಗಮಿಸಿದ್ದಾರೆ. ವಿಶ್ವದ 162 ದೇಶಗಳಿಂದ ವಿದ್ಯಾರ್ಥಿಗಳು ಭಾರತಕ್ಕೆ ಅಧ್ಯಯನಕ್ಕೆಂದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣಕ್ಕೆ ದಾಖಲು ಮಾಡಿಕೊಳ್ಳುತ್ತಿದ್ದು ಅವರ ಸಂಖ್ಯೆ ಶೇಕಡಾ 76.9ರಷ್ಟಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com