ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕ ರಾಜ್ಯಕ್ಕೆ ಬಂದಾಗಲೆಲ್ಲಾ ನಾನು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತೇನೆ. ಈ ಬಾರಿ ಕೂಡ ಮಠಕ್ಕೆ ಭೇಟಿ ನೀಡಲಾಗುತ್ತಿದ್ದು, ಬಳಿಕ ಪರಿವರ್ತವಾ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದ್ದಾರೆ. ಅಲ್ಲದೆ, ಸೇವೆಯ ಉದ್ದೇಶದಿಂದ ನಾನು ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದೇವೆಂದು ಇದೇ ವೇಳೆ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.