ಖಾಸಗಿ ವೈದ್ಯ ಸೀಟಿನ ಸರ್ಕಾರಿ ಕೋಟಾ ಶುಲ್ಕ ಶೇ.50ರಷ್ಟು ಹೆಚ್ಚಳಕ್ಕೆ ಮನವಿ

ಕರ್ನಾಟಕ ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಘ ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಪ್ರವೇಶಕ್ಕೆ ಶೇ.50 ರಷ್ಟು ಶುಲ್ಕ ಹೆಚ್ಚಳ ಮಾಡುವಂಕೆ ರಾಜ್ಯ ಸರ್ಕಾರದ ಬಳಿ ಮನವಿ ಮಾಡಿಕೊಂಡಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಘ ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಪ್ರವೇಶಕ್ಕೆ ಶೇ.50 ರಷ್ಟು ಶುಲ್ಕ ಹೆಚ್ಚಳ ಮಾಡುವಂಕೆ ರಾಜ್ಯ ಸರ್ಕಾರದ ಬಳಿ ಮನವಿ ಮಾಡಿಕೊಂಡಿದೆ. 
ಕಳೆದ ವರ್ಷ ಖಾಸಗಿ ಕಾಲೇಜುಗಳ ಮ್ಯಾನೇಜ್ ಮೆಂಟ್ ಕೋಟಾ ಸೀಟುಗಳ ವೈದ್ಯ ಪದವಿಗೆ ರೂ.6.60ಲಕ್ಷ ಹಾಗೂ ಸರ್ಕಾರಿ ವೈದ್ಯ ಪದವಿ ಶುಲ್ಕ ರೂ.4.40 ಲಕ್ಷ ನಿಗದಿ ಮಾಡಲಾಗಿತ್ತು. ಅದೇ ರೀತಿ ಆಡಳಿತ ಮಂಡಳಿಯ ದಂತ ವೈದ್ಯ ಕೋರ್ಸ್ ಶುಲ್ಕ ರೂ.3.52 ಲಕ್ಷ, ಸರ್ಕಾರಿ ಸೀಟುಗಳ ಶುಲ್ಕ ರೂ.2.25 ಲಕ್ಷ ನಿಗದಿ ಮಾಡಿತ್ತು. 208-19ನೇ ಸಾಲಿಗೆ ಈ ಶುಲ್ಕವನ್ನು ಕನಿಷ್ಟ ಶೇ.50 ರಷ್ಟು ಹೆಚ್ಚಳ ಮಾಡಬೇಕೆಂದು ಮನವಿಯಲ್ಲಿ ಖಾಸಗಿ ಕಾಲೇಜುಗಳು ತಿಳಿಸಿವೆ. 
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಶುಲ್ಕ ನಿಗದಿ ಬಗ್ಗೆ ಕಾಮೆಡ್-ಕೆ ಹಾಗೂ ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಂಡಳಿ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮನವಿ ಮಾಡಿಕೊಂಡಿದ್ದು, ಈ ಬಗ್ಗೆ ಚರ್ಚಿಸಿ ವಿದ್ಯಾರ್ಥಿಗಳ ಹಿಂತಕ್ಕೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ಹೊರತುಪಡಿಸಿ ಕಾಮೆಡ್-ಕೆ, ಧಾರ್ಮಿಕ ಹಾಗೂ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಪ್ರತಿನಿಧಿಗಳು ಶುಲ್ಕ ಹೆಚ್ಚಳ ಮತ್ತಿತರ ಕಾರಣ ನೀಡಿ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮನವಿ ಮಾಡಿಕೊಂಡಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com