ಬಶೀರ್ ಸಾವಿನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ ಅವರು, ಕಣ್ಣಿಗೆ ಕಣ್ಣು ಎಂದಾದರೆ ಇಡೀ ಪ್ರಪಂಚವೇ ಅಂಧವಾಗುತ್ತದೆ. ದೀಪಕ್ ಹತ್ಯೆಗೆ ಬಶೀರ್ ಸಾವು ಉತ್ತರವಲ್ಲ. ರಾಜ್ಯದಲ್ಲಿ ಶಾಂತಿ ಮರು ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರಕ್ಕೆ ಉತ್ಸಾಹವಿಲ್ಲ. ಹೀಗಾಗಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರು ಸೌಹಾರ್ಧ ಸಭೆ ನಡೆಸುವ ಸಮಯ ಬಂದಿದೆ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.