ಈ ಸಂಬಂಧ ನಗರದಲ್ಲಿರುವ ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದು, ಕಡ್ಡಾಯವಾಗಿ ಅಗ್ನಿ ಸುರಕ್ಷಿತ ವ್ಯವಸ್ಥೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ದುರಂತ ನಡೆದ ಕಲಾಸಿಪಾಳ್ಯಕ್ಕೆ ಭೇಟಿ ನೀಡಿರುವ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ತಾವು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು, ನಗರದಲ್ಲಿರುವ ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.