ಬೆಂಗಳೂರು: ಕಲಾಸಿಪಾಳ್ಯ ಬಾರ್ ನಲ್ಲಿ ಅಗ್ನಿ ಅವಘಡ; ಐವರು ಸಜೀವ ದಹನ

ಬೆಂಗಳೂರಿನ ಕಲಾಸಿಪಾಳ್ಯದ ಬಾರ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕೆಲಸ ಮಾಡುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ.
ಕೈಲಾಶ್ ಬಾರ್ ನಲ್ಲಿ ಅಗ್ನಿ ಅವಘಡ
ಕೈಲಾಶ್ ಬಾರ್ ನಲ್ಲಿ ಅಗ್ನಿ ಅವಘಡ
Updated on: 
ಬೆಂಗಳೂರು: ಮುಂಬೈ ರೂಫ್ ಟಾಪ್ ಪಬ್ ದುರಂತದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಐವರು ಸಜೀವವಾಗಿ ದಹನವಾಗಿದ್ದಾರೆ.
ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವ ಕೈಲಾಶ್ ಬಾರ್ ನಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ರಾತ್ರಿ ಸುಮಾರು 2.30ರ ಸುಮಾರಿನಲ್ಲಿ ಬೆಂಕಿ ಹೊತ್ತಿದೆ. ಬಳಿಕ ಕ್ಷಣ ಮಾತ್ರದಲ್ಲಿ ಬೆಂಕಿ ಇಡೀ ಬಾರ್ ಆನ್ನು ವ್ಯಾಪಿಸಿದ್ದು,  ತಪ್ಪಿಸಿಕೊಳ್ಳಲಾಗದೇ ಕಾರ್ಮಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. 
ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ರಾತ್ರಿ 3 ಗಂಟೆ ಹೊತ್ತಿಗೆ ಬೆಂಕಿ ನಿದಿಸಿದರಾದರೂ, ಅಷ್ಟು ಹೊತ್ತಿಗಾಗಲೇ ಬೆಂಕಿಯಿಂದಾಗಿ ಐವರು ಕಾರ್ಮಿಕರು ಶವವಾಗಿದ್ದರು. ಇನ್ನು ಮೃತರನ್ನು ತುಮಕೂರಿನ  ಗುಬ್ಬಿ ತಾಲೂಕಿನ ಮೂಲದ ಸ್ವಾಮಿ(23), ಪ್ರಸಾದ್(20), ಮಹೇಶ್ (35), ಹಾಸನದ ಮಂಜುನಾಥ್ ( 45), ಮಂಡ್ಯದ ಕೀರ್ತಿ(24) ಎಂದು ಗುರುತಿಸಲಾಗಿದೆ. 
ಕೈಲಾಶ್ ಬಾರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಾರ್ ಕಟ್ಟಡ ಸುಮಾರು 20 ರಿಂದ 30 ವರ್ಷಗಳ ಹಳೆಯದು ಎಂದು ತಿಳಿದು ಬಂದಿದೆ. ಹಾಗಾಗಿ ಕಟ್ಟಡದಲ್ಲಿ ಯಾವುದೇ ಎಮರ್ಜಿನ್ಸಿ ಎಕ್ಸಿಟ್ ಇಲ್ಲದ ಕಾರಣ ಐವರು ಸಜೀವ  ದಹನವಾಗಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಕಟ್ಟಡದ ಸಾಕಷ್ಟು ವೈರ್‍ಗಳಿರುವ ಜಂಕ್ಷನ್ ಬಾಕ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ. ಶಾರ್ಟ್  ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕೆಆರ್ ಮಾರುಕಟ್ಟೆ ಪೊಲೀಸರು ಬಾರ್ ಮಾಲೀಕ ಆರ್.ವಿ.ದಯಾಶಂಕರ್ ಎಂಬುವವರನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com